ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಕ್ಯಾನ್ಸರ್ನಿಂದ ಗುಣಮುಖರಾಗಿ ಬಂದಿರುವ ಶಿವರಾಜ್ಕುಮಾರ್ ಅವರನ್ನು ಅನೇಕ ಸೆಲೆಬ್ರಿಟಿಗಳು ಭೇಟಿ ಆಗುತ್ತಿದ್ದಾರೆ. ಇಂದು (ಜ.27) ಡಾಲಿ ಧನಂಜಯ ಅವರು ಶಿವಣ್ಣನ ಭೇಟಿ ಮಾಡಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿ ಖುಷಿಯ ಸುದ್ದಿ ಹಂಚಿಕೊಂಡರು. ಶಿವಣ್ಣ ನಮಗೆಲ್ಲ ಮಾದರಿ ಎಂದು ಡಾಲಿ ಹೇಳಿದ್ದಾರೆ.
ಶಿವರಾಜ್ಕುಮಾರ್ ಅವರು ಕ್ಯಾನ್ಸರ್ನಿಂದ ಗುಣಮುಖರಾಗಿದ್ದಾರೆ. ಅವರನ್ನು ಭೇಟಿ ಮಾಡಿದ ಡಾಲಿ ಧನಂಜಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಶಿವಣ್ಣ ಅವರನ್ನು ನೋಡಿ ಬಹಳ ಖುಷಿ ಆಯಿತು. ಈಗ ಆರಾಮಾಗಿದ್ದಾರೆ. ಇನ್ನು ಎರಡು ಅಥವಾ ಮೂರು ವಾರದಲ್ಲಿ ಅವರು ಶೂಟಿಂಗ್ ಕೂಡ ಮಾಡಬಹುದು. ಅಂಥ ಪರಿಸ್ಥಿತಿಯನ್ನು ಅವರು ಗೆದ್ದು ಬಂದಿದ್ದಾರೆ. ಯಾರ ಮುಂದೆಯೂ ಅವರು ಕುಗ್ಗಲಿಲ್ಲ. ಇನ್ನೂ ಗಟ್ಟಿಯಾಗಿ ವಾಪಸ್ ಬಂದಿದ್ದಾರೆ’ ಎಂದು ಡಾಲಿ ಧನಂಜಯ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ

ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್

ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ

ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
