ನೆಲಮಂಗಲ: ಹೆದ್ದಾರಿಯಲ್ಲೇ ಕಾರು ಬೈಕ್ ನಿಲ್ಲಿಸಿ ರಂಪಾಟ, ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್

Edited By:

Updated on: Jan 27, 2025 | 1:12 PM

ಸಣ್ಣ ಅಪಘಾತದ ಬಳಿಕ ಚಾಲಕರಿಬ್ಬರು ದರ್ಪ ಮೆರೆದಿದ್ದರಿಂದ ದಾಬಸ್ ಪೇಟೆ ಎಡೇಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಿಲೋ ಮೀಟರ್​​ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ಇದೇ ವೇಳೆ, ಸ್ಥಳದಲ್ಲಿ ಇತರ ಚಾಲಕರು ಹಾಗೂ ಕಾರು ಚಾಲಕನ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು. ವಿಡಿಯೋ ಇಲ್ಲಿದೆ.

ನೆಲಮಂಗಲ, ಜನವರಿ 27: ಕಾರಿಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿಯಾದ ಕಾರಣ ಚಾಲಕರು ಹೆದ್ದಾರಿಯಲ್ಲೇ ಕಾರು, ಬೈಕ್ ನಿಲ್ಲಿಸಿ ರಂಪಾಟ ನಡೆಸಿದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಎಡೇಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೋಮವಾರ ಟ್ರಾಫಿಕ್ ಜಾಮ್ ಉಂಟಾಯಿತು. ಟ್ರಾಫಿಕ್ ಜಾಮ್ ಆಗಿ ಸಮಸ್ಯೆ ಆಗುತ್ತದೆ ಕಾರು ಸೈಡ್​​​ಗೆ ಹಾಕಿ ಎಂದಿದ್ದಕ್ಕೆ ಚಾಲಕ ದರ್ಪ ಮೆರೆದಿದ್ದಾನೆ. ಸದ್ಯ, ಸಾರ್ವಜನಿಕರ ವಾಹನಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More