ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ

Updated on: Apr 18, 2025 | 7:08 AM

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಎಂಬುವುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ತುಪ್ಪವು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದೆ ಮತ್ತು ದೀರ್ಘಾಯುಷ್ಯಕ್ಕೆ ಕೊಡುಗೆ ನೀಡುತ್ತದೆ ಎಂದು ಹೇಳಲಾಗಿದೆ. ಮಕ್ಕಳಿಗೆ ತುಪ್ಪವು ಜ್ಞಾಪಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ.

ಬೆಂಗಳೂರು, ಏಪ್ರಿಲ್​​ 18: ಭಾರತದಲ್ಲಿ ಅನಾದಿಕಾಲದಿಂದಲೂ ಆಹಾರ ಮತ್ತು ಔಷಧೀಯ ಉದ್ದೇಶಗಳಿಗೆ ತುಪ್ಪ ಬಳಸಲಾಗುತ್ತದೆ. ಆಯುರ್ವೇದದಲ್ಲಿ ತುಪ್ಪಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ತುಪ್ಪವು ವಿಟಮಿನ್ ಎ, ಡಿ, ಇ ಮತ್ತು ಕೆ ಯಂತಹ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ತುಪ್ಪದ ಬಳಕೆ ಆಹಾರದಲ್ಲಿ ಮಾತ್ರವಲ್ಲ, ಹೋಮ ಹವನಗಳಲ್ಲಿ ಮತ್ತು ಧಾರ್ಮಿಕ ವಿಧಿಗಳಲ್ಲಿಯೂ ಬಳಸಲಾಗುತ್ತದೆ.

 

Published on: Apr 18, 2025 07:04 AM