Daily Devotional: ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗುಲಿ ಮಾಲೆ, ದಕ್ಷಿಣ ಭಾರತದಲ್ಲಿ ಜನಪ್ರಿಯವಾದ ಕಪ್ಪು ಮಣಿಗಳ ಹಾರ. ಸಾವಿರಾರು ವರ್ಷಗಳ ಇತಿಹಾಸವಿದೆ. ರಾಮಾಯಣ ಮತ್ತು ಮಹಾಭಾರತದಲ್ಲಿಯೂ ಉಲ್ಲೇಖವಿದೆ. ಇದನ್ನು ಧರಿಸುವುದರಿಂದ ಮಂಗಳ ಗ್ರಹದ ಶಾಂತಿ, ರಕ್ಷಣೆ, ಸಂಪತ್ತು ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂಬ ನಂಬಿಕೆಯಿದೆ. ಈ ಬಗ್ಗೆ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.
ಬೆಂಗಳೂರು, ಮೇ 08: ಕರುಂಗಲಿ ಮಾಲೆ ದಕ್ಷಿಣ ಭಾರತದಲ್ಲಿ ಬಹಳ ಜನಪ್ರಿಯವಾದ ಕಪ್ಪು ಮಣಿಗಳಿಂದ ಮಾಡಿದ ಹಾರ. ಇದು ಎಬೋನಿ ಮರದಿಂದ ತಯಾರಿಸಲ್ಪಟ್ಟಿದೆ ಎಂದು ಹೇಳಲಾಗುತ್ತದೆ. ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ರಾಮಾಯಣ ಮತ್ತು ಮಹಾಭಾರತದಂತಹ ಪ್ರಾಚೀನ ಗ್ರಂಥಗಳಲ್ಲಿಯೂ ಇದರ ಉಲ್ಲೇಖವಿದೆ. ಕರುಂಗಲಿ ಮಾಲೆ ಧರಿಸುವುದರಿಂದ ನಕಾರಾತ್ಮಕ ಶಕ್ತಿಗಳಿಂದ ರಕ್ಷಿಸುತ್ತದೆ ಎಂಬ ನಂಬಿಕೆ ಇದೆ. ಈ ಬಗ್ಗೆ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.

