Daily Devotional: ಮನೆಯಲ್ಲಿನ ದೇವರ ಫೋಟೋ, ವಿಗ್ರಹಗಳು ಒಡೆದರೆ ಏನರ್ಥ? ವಿಡಿಯೋ ನೋಡಿ
ಹಿಂದೂ ಧರ್ಮವು ಇತರ ಧರ್ಮಗಳಿಗಿಂತ ಹೆಚ್ಚಾಗಿ ಮೂರ್ತಿ ಪೂಜೆಯನ್ನು ಬೆಂಬಲಿಸುತ್ತದೆ. ಇದರಿಂದ ಪೂಜೆಯಲ್ಲಿ ಏಕಾಗ್ರತೆಯು ಅಧಿಕವಾಗುತ್ತದೆ ಎಂದು ಅಧ್ಯಯನಕಾರರು ಸ್ಪಷ್ಟಪಡಿಸಿದ್ದಾರೆ. ಮನೆಯಲ್ಲಿನ ಮನೆಯಲ್ಲಿ ದೇವರ ಫೋಟೋ ಒಡೆದರೆ ಅಥವಾ ಮೂರ್ತಿ ಭಗ್ನವಾದರೆ ಏನರ್ಥ?
ಹಿಂದೂ ಧರ್ಮವು ಇತರ ಧರ್ಮಗಳಿಗಿಂತ ಹೆಚ್ಚಾಗಿ ಮೂರ್ತಿ ಪೂಜೆಯನ್ನು ಬೆಂಬಲಿಸುತ್ತದೆ. ಇದರಿಂದ ಪೂಜೆಯಲ್ಲಿ ಏಕಾಗ್ರತೆಯು ಅಧಿಕವಾಗುತ್ತದೆ ಎಂದು ಅಧ್ಯಯನಕಾರರು ಸ್ಪಷ್ಟಪಡಿಸಿದ್ದಾರೆ. ಮನೋವಿಜ್ಞಾನಿಗಳ ಪ್ರಕಾರ ಮನುಷ್ಯನು ತಾನು ನೋಡುವುದರ ಆಧಾರದ ಮೇಲೆ ಆಲೋಚನೆಗಳನ್ನು ಹೊಂದುತ್ತಾನಂತೆ. ಒಂದು ವೇಳೆ ನಿಮ್ಮ ಮುಂದೆ ಮೂರು ವಸ್ತುಗಳು ಇದ್ದಲ್ಲಿ, ಅದರಲ್ಲಿ ಯಾವ ವಸ್ತುವನ್ನು ನೋಡುತ್ತೀರಿ ಎಂಬುದರ ಮೇಲೆ ನಿಮ್ಮ ಭಾವನೆಗಳು ಬದಲಾಗುತ್ತವೆಯಂತೆ. ಈ ಕಾರಣವಾಗಿಯೇ ಪ್ರಾಚೀನ ಕಾಲದಲ್ಲಿ ಮೂರ್ತಿ ಪೂಜೆಯು ಆರಂಭಗೊಂಡಿತು. ಯಾವಾಗ ಜನರು ದೇವರನ್ನು ಮೂರ್ತಿಯ ರೂಪದಲ್ಲಿ ನೋಡಲು ಆರಂಭಿಸಿದರೋ, ಆಗಲೇ ಅವರ ಮನಸ್ಸನ್ನು ಏಕ ಚಿತ್ತದಿಂದ ದೇವರ ಮೇಲೆ ನೆಲೆಗೊಳಿಸಲು ಸಾಧ್ಯವಾಗುತ್ತ ಹೋಯಿತು. ಇದರಿಂದ ಅವರ ಧ್ಯಾನಕ್ಕೆ ಯಾವುದೇ ಭಂಗ ಬರುತ್ತಿರಲಿಲ್ಲ ಮತ್ತು ಅವರಲ್ಲಿ ಆಧ್ಯಾತ್ಮಿಕ ಶಕ್ತಿಯು ಹೆಚ್ಚಾಗುತ್ತ ಹೋಗುತ್ತಿತ್ತು. ಮನೆಯಲ್ಲಿ ದೇವರ ಫೋಟೋ ಒಡೆದರೆ ಅಥವಾ ಮೂರ್ತಿ ಭಗ್ನವಾದರೆ ಏನರ್ಥ?
ಮನೆಯಲ್ಲಿರುವ ದೇವರ ಫೋಟೋ ಒಡೆದರೆ ಅಥವಾ ಮೂರ್ತಿ ಭಗ್ನವಾಗಿದ್ದರೆ ಮೂರ್ತಿಯು ಬಿದ್ದು ಭಗ್ನವಾದರೆ ಅದು ಅಪಶಕುನವೆಂದು ತಿಳಿಯಲಾಗುತ್ತದೆ. ದೇವತೆಯ ಮುಕುಟ ಬಿದ್ದರೆ, ಅದೂ ಒಂದು ಅಪಶಕುನವಾಗುತ್ತದೆ. ಅದು, ಮುಂಬರುವ ಸಂಕಟದ ಮುನ್ಸೂಚನೆ ಇರಬಹುದು. ಇಂತಹ ಸಮಯದಲ್ಲಿ ಆ ಮೂರ್ತಿಯನ್ನು ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಿ ಹೊಸದಾದ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡಬೇಕು.