Daily Devotional: ಸ್ವರ್ಣಗೌರಿ ವ್ರತದ ಮಹತ್ವ, ಗೌರಿ ಹಬ್ಬ ಹೇಗೆ ಆಚರಿಸಬೇಕು? ವಿಡಿಯೋ ನೋಡಿ

Daily Devotional: ಸ್ವರ್ಣಗೌರಿ ವ್ರತದ ಮಹತ್ವ, ಗೌರಿ ಹಬ್ಬ ಹೇಗೆ ಆಚರಿಸಬೇಕು? ವಿಡಿಯೋ ನೋಡಿ

ವಿವೇಕ ಬಿರಾದಾರ
|

Updated on: Sep 06, 2024 | 7:02 AM

ಪ್ರತಿ ವರ್ಷ ಭಾದ್ರಪದ ಮಾಸದ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಸುಮಂಗಲೆಯರಿಗೆ ಸಕಲ ಸೌಭಾಗ್ಯ ನೀಡುವ ಹಬ್ಬ. ಭಾದ್ರಪದ ಮಾಸದ ಶುದ್ಧ ತದಿಗೆಯನ್ನು ಗೌರಿ ಹಬ್ಬವನ್ನು ಸ್ವರ್ಣ ಗೌರಿ ವ್ರತದ ಮೂಲಕ ಆಚರಣೆ ಮಾಡಲಾಗುತ್ತದೆ. ಸ್ವರ್ಣ ಗೌರಿ ವ್ರತವನ್ನು ಏಕೆ ಮಾಡಬೇಕು? ಹೇಗೆ ಮಾಡಬೇಕು? ವ್ರತದ ಹಿಂದಿನ ಕಾರಣವೇನು? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ಪ್ರತಿ ವರ್ಷ ಭಾದ್ರಪದ ಮಾಸದ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಸುಮಂಗಲೆಯರಿಗೆ ಸಕಲ ಸೌಭಾಗ್ಯ ನೀಡುವ ಹಬ್ಬ. ಭಾದ್ರಪದ ಮಾಸದ ಶುದ್ಧ ತದಿಗೆಯನ್ನು ಗೌರಿ ಹಬ್ಬವನ್ನು ಸ್ವರ್ಣ ಗೌರಿ ವ್ರತದ ಮೂಲಕ ಆಚರಣೆ ಮಾಡಲಾಗುತ್ತದೆ. ಹೆಸರೇ ಸೂಚಿಸುವಂತೆ ಸ್ವರ್ಣ ಅಂದರೆ ಬಂಗಾರ, ಬಂಗಾರದ ಬಣ್ಣದಂತೆ ಹೊಳೆಯುವ ಜಗನ್ಮಾತೆಯಾದ ಗೌರಿಯನ್ನು ಈ ದಿನ ಷೋಡಶೋಪಚಾರದಿಂದ ಪೂಜಿಸಲಾಗುತ್ತದೆ.

ಮಹಿಳೆಯರೆಲ್ಲರಿಗೂ ಗೌರಿ ಹಬ್ಬ ಬಂತೆಂದರೆ ಸಡಗರ. ಮನೆಯಲ್ಲಿ ಮಂಟಪ ನಿರ್ಮಿಸಿ ಬಾಳೆ ಕಂದು, ಮಾವಿನ ತೋರಣ ಕಟ್ಟಿ ಅಲಂಕಾರ ಮಾಡಿ ಗೌರಿ ಮೂರ್ತಿಯನ್ನು ಶೃಂಗರಿಸಿ ಸಡಗರದಿಂದ ಗೌರಿ ಹಬ್ಬವನ್ನು ಆಚರಿಸುತ್ತಾರೆ. ಗಣೇಶ ಹಬ್ಬದ ರೀತಿಯಲ್ಲಿ ವಿಜೃಂಭಣೆಯಿಂದ ಆಚರಿಸದಿದ್ದರೂ ಸರಳವಾಗಿ ಭಕ್ತಿಯಿಂದ ಆಚರಿಸಲಾಗುತ್ತದೆ. ಸ್ವರ್ಣ ಗೌರಿ ವ್ರತವನ್ನು ಏಕೆ ಮಾಡಬೇಕು? ಹೇಗೆ ಮಾಡಬೇಕು? ವ್ರತದ ಹಿಂದಿನ ಕಾರಣವೇನು? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ