Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?

Updated on: May 14, 2025 | 7:38 AM

ಹಿಂದೂ ಸಂಪ್ರದಾಯದ ಪ್ರಕಾರ ಪ್ರಸಾದವನ್ನು ಬಲಗೈಯಲ್ಲಿ ಸ್ವೀಕರಿಸಲಾಗುತ್ತದೆ. ಬಲಗೈಯಲ್ಲಿ ಸೂರ್ಯನ ಅಂಶ ಹೆಚ್ಚಿರುತ್ತದೆ. ಮನಸ್ಸು ಶಾಂತವಾಗುತ್ತದೆ. ಪ್ರಸಾದ ಸ್ವೀಕರಿಸುವಾಗ ತೋರುಬೆರಳು ಪ್ರಸಾದವನ್ನು ಮುಟ್ಟದಿರುವುದು ಮುಖ್ಯ. ಇದು ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಈ ಬಗ್ಗೆ ಡಾ. ಬಸವರಾಜ್ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ ನೋಡಿ.

ಬೆಂಗಳೂರು, ಮೇ 14: ಪ್ರಸಾದವನ್ನು ಬಲಗೈಯಲ್ಲಿ ಸ್ವೀಕರಿಸುವುದು ಹಿಂದೂ ಧರ್ಮದಲ್ಲಿ ಸಾಮಾನ್ಯ ಪದ್ಧತಿ. ಆದರೆ ಇದರ ಹಿಂದಿನ ಕಾರಣವೇನು ಎಂಬುವುದನ್ನು ಡಾ. ಬಸವರಾಜ್ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಬಲಗೈಯಲ್ಲಿ ಸೂರ್ಯನ ಅಂಶ ಹೆಚ್ಚಾಗಿರುತ್ತದೆ ಎಂದು ಹೇಳಲಾಗುತ್ತದೆ. ಪ್ರಸಾದ ಸ್ವೀಕರಿಸುವಾಗ ಬಲಗೈಯನ್ನು ಬಳಸುವುದರಿಂದ ಮನಸ್ಸು ಶಾಂತವಾಗುತ್ತದೆ ಮತ್ತು ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ. ವಿಡಿಯೋ ನೋಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More