Daily Devotional: ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ವಾಸ್ತುಶಾಸ್ತ್ರದ ಪ್ರಕಾರ, ನಮ್ಮ ವಾಸಸ್ಥಳ, ಕಚೇರಿ ಅಥವಾ ವ್ಯಾಪಾರ ಸ್ಥಳದಲ್ಲಿ ಕೆಲವು ಸಸ್ಯಗಳನ್ನು ಇಡುವುದು ಅದೃಷ್ಟ ಮತ್ತು ಸಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸುತ್ತದೆ. ಇಂತಹ ಸಸ್ಯಗಳನ್ನು ನೋಡಿದಾಗ ನಮ್ಮ ಮನಸ್ಸು ಕೂಡ ಸಕಾರಾತ್ಮಕವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇರುತ್ತದೆ. ಲೋಳೆ ರಸ ಅಥವಾ ಅಲೋವೆರಾ ಒಂದು ವಿಶೇಷವಾದ ಗಿಡವಾಗಿದೆ. ಇದನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಶುಭವಾಗುತ್ತದೆ ಎಂಬ ನಂಬಿಕೆ ಇದೆ.
ಬೆಂಗಳೂರು, ಜನವರಿ 10: ವಾಸ್ತುಶಾಸ್ತ್ರದ ಪ್ರಕಾರ, ನಮ್ಮ ವಾಸಸ್ಥಳ, ಕಚೇರಿ ಅಥವಾ ವ್ಯಾಪಾರ ಸ್ಥಳದಲ್ಲಿ ಕೆಲವು ಸಸ್ಯಗಳನ್ನು ಇಡುವುದು ಅದೃಷ್ಟ ಮತ್ತು ಸಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸುತ್ತದೆ. ಇಂತಹ ಸಸ್ಯಗಳನ್ನು ನೋಡಿದಾಗ ನಮ್ಮ ಮನಸ್ಸು ಕೂಡ ಸಕಾರಾತ್ಮಕವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇರುತ್ತದೆ. ಲೋಳೆ ರಸ ಅಥವಾ ಅಲೋವೆರಾ ಒಂದು ವಿಶೇಷವಾದ ಗಿಡವಾಗಿದೆ. ಇದನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಶುಭವಾಗುತ್ತದೆ ಎಂಬ ನಂಬಿಕೆ ಇದೆ.
ಅಲೋವೆರಾ ಗಿಡವನ್ನು ವಾಸ್ತುಶಾಸ್ತ್ರದ ನಿಯಮಗಳ ಪ್ರಕಾರ ಇರಿಸಿದಾಗ, ಅದು ವೃತ್ತಿ ಜೀವನ, ಆರ್ಥಿಕ ಸ್ಥಿತಿ ಮತ್ತು ಆರೋಗ್ಯದ ಮೇಲೆ ಧನಾತ್ಮಕ ಪ್ರಭಾವ ಬೀರುತ್ತದೆ. ಈ ಗಿಡವು ಸುತ್ತಮುತ್ತಲಿನ ವಾತಾವರಣದಲ್ಲಿ ಸಕಾರಾತ್ಮಕ ಮತ್ತು ಧನಾತ್ಮಕ ಶಕ್ತಿಗಳನ್ನು ಹೆಚ್ಚಿಸುತ್ತದೆ. ಅಲೋವೆರಾವನ್ನು ಬಾಲ್ಕನಿಯಲ್ಲಿ, ಗಾಳಿ ಬರುವ ಜಾಗದಲ್ಲಿ ಮತ್ತು ಸ್ವಲ್ಪ ಸೂರ್ಯನ ಬೆಳಕು ಬೀಳುವ ಸ್ಥಳದಲ್ಲಿ ಇಡುವುದು ಬಹಳ ಶುಭಕರ.
ಆದರೆ, ಅಲೋವೆರಾವನ್ನು ಯಾವುದೇ ಕಾರಣಕ್ಕೂ ವಾಯುವ್ಯ ಮತ್ತು ಆಗ್ನೇಯ ದಿಕ್ಕುಗಳಲ್ಲಿ ಇಡಬಾರದು ಎಂದು ವಾಸ್ತುಶಾಸ್ತ್ರ ಹೇಳುತ್ತದೆ. ಇದು ಋಣಾತ್ಮಕ ಶಕ್ತಿಗಳನ್ನು ನಿವಾರಿಸುವ ಗುಣವನ್ನು ಹೊಂದಿದೆ. ಅಲೋವೆರಾ ಒಂದು ಮಂಗಳಕರ ಮತ್ತು ಪವಿತ್ರ ಗಿಡವೆಂದು ಪರಿಗಣಿಸಲಾಗುತ್ತದೆ, ಇದು ಶಾಂತಿ, ನೆಮ್ಮದಿ ಮತ್ತು ಸೌಖ್ಯವನ್ನು ತರುತ್ತದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

