AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಲಾಭ, ಆರೋಗ್ಯದಲ್ಲಿ ಏರುಪೇರು ಸಾಧ್ಯತೆ

Daily Horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಲಾಭ, ಆರೋಗ್ಯದಲ್ಲಿ ಏರುಪೇರು ಸಾಧ್ಯತೆ

ಗಂಗಾಧರ​ ಬ. ಸಾಬೋಜಿ
|

Updated on: May 09, 2024 | 6:46 AM

Share

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 09) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಸೌಭಾಗ್ಯ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ 14:05 ರಿಂದ 15:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:08 ರಿಂದ 07:43ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:19 ರಿಂದ 10:54ರ ವರೆಗೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ.ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಮೇ 08) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More