ವರಮಹಾಲಕ್ಷ್ಮೀ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ

Updated on: Aug 08, 2025 | 6:55 AM

ಆಗಸ್ಟ್ 8ರ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿಯವರು 12 ರಾಶಿಗಳ ಫಲಾಫಲಗಳ ಬಗ್ಗೆ ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ಶುಭ ಸುದ್ದಿ, ವೃಷಭ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಜಾಗ್ರತರಾಗಿರುವುದು ಅಗತ್ಯ. ವರಮಹಾಲಕ್ಷ್ಮೀ ಹಬ್ಬದ ಮಹತ್ವ ಮತ್ತು ಪೂಜಾ ಸಮಯದ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಬೆಂಗಳೂರು, ಆಗಸ್ಟ್​ 8: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ಎಲ್ಲಾ 12 ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಉತ್ತರಾಷಾಡ ನಕ್ಷತ್ರ ಮತ್ತು ಮಕರ ರಾಶಿಯಲ್ಲಿ ಚಂದ್ರನ ಸಂಚಾರದ ಪ್ರಭಾವವನ್ನು ಒಳಗೊಂಡಿದೆ. ಈ ದಿನ ವರಮಹಾಲಕ್ಷ್ಮೀ ಹಬ್ಬವಾಗಿದ್ದು, ಪೂಜಾ ಸಮಯವನ್ನು ಕೂಡ ಅವರು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗಳ ಫಲಾಫಲಗಳ ಬಗ್ಗೆ ವಿಡಿಯೋದಲ್ಲಿ ವಿವರಿಸಿದ್ದಾರೆ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More