Daily horoscope: ಮಿಥುನ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ

Updated on: May 04, 2025 | 6:53 AM

ಮೇ 04ರ ರಾಶಿ ಫಲಗಳನ್ನು ಡಾ. ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭಫಲ ಮತ್ತು ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲ ಇದೆ. ಈ ದಿನ ಗಂಗಾ ಸಪ್ತಮಿ ಕೂಡ ಆಚರಿಸಲಾಗುತ್ತದೆ.

ಬೆಂಗಳೂರು, ಮೇ 04: ಈ ದಿನ ಗಂಗಾ ಸಪ್ತಮಿ ಆಗಿರುವುದರಿಂದ, ಅರಿಶಿನ ಮತ್ತು ಉಪ್ಪು ಬೆರೆಸಿದ ನೀರಿನಿಂದ ಸ್ನಾನ ಮಾಡುವುದು ಶುಭಕರ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲಗಳಿವೆ. ಕೆಲಸದಲ್ಲಿ ಜಯ, ವೃತ್ತಿಪ್ರಗತಿ ಮತ್ತು ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಂಡುಬರುತ್ತದೆ. ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭಫಲಗಳಿವೆ. ಕಠಿಣ ನಿರ್ಧಾರಗಳಿಂದ ಯಶಸ್ಸು ಸಾಧ್ಯ. ಮಕ್ಕಳಿಂದ ಶುಭ ಸುದ್ದಿಗಳು ಕೇಳಿಬರುತ್ತವೆ. ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲಗಳಿವೆ. ಲೇವಾದೇವಿಗಳು ಚೆನ್ನಾಗಿ ನಡೆಯುತ್ತವೆ. ಬಂಧುಗಳೊಂದಿಗೆ ಹಣಕಾಸಿನ ವ್ಯವಹಾರಗಳನ್ನು ಮಾಡದಿರುವುದು ಒಳ್ಳೆಯದು.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More