ರವಿ ಮೀನ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ

| Updated By: Ganapathi Sharma

Updated on: Mar 22, 2025 | 6:51 AM

ಮಾರ್ಚ್ 22, 2025 ರಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನುಸ್ಸು, ಮಕರ, ಕುಂಭ ಮತ್ತು ಮೀನ ರಾಶಿಗಳಿಗೆ ಗ್ರಹಗಳ ಸ್ಥಿತಿಯ ಆಧಾರದ ಮೇಲೆ ಶುಭ ಮತ್ತು ಅಶುಭ ಫಲಗಳನ್ನು ಇಲ್ಲಿ ವಿವರಿಸಲಾಗಿದೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ದಿಕ್ಕುಗಳನ್ನು ಸಹ ತಿಳಿಸಲಾಗಿದೆ. ಜಲ ದಿನಾಚರಣೆಯ ಪ್ರಾಮುಖ್ಯತೆಯನ್ನು ಕೂಡ ಉಲ್ಲೇಖಿಸಲಾಗಿದೆ.

ಇಂದು 22-03-2025 ಶನಿವಾರ, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಅಷ್ಟಮಿ, ಮೂಲ ನಕ್ಷತ್ರ, ವ್ಯತಿಪಾತ ಯೋಗ, ಬಾಲವಕರಣ ಇರತಕ್ಕಂತಹ ಈ ದಿನದ ರಾಹುಕಾಲ 9.24 ರಿಂದ 10.55 ರ ವರೆಗೆ ರಾಹುಕಾಲ ಇರುತ್ತೆ. ಹಾಗೆ ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 1.57 ರಿಂದ 3.28 ರ ವರೆಗೆ ಇರಲಿದೆ. ದ್ವಾದಶ ರಾಶಿಗಳ ಇಂದಿನ ಫಲಾಫಲವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.