Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ

Updated on: Jun 01, 2025 | 6:51 AM

ಜೂನ್ 1, 2025 ರಂದು ಡಾ. ಬಸವರಾಜ ಗುರೂಜಿ ಅವರು ಇಂದಿನ ದಿನಭವಿಷ್ಯವನ್ನು ತಿಳಿಸಿಕೊಟ್ಟಿದ್ದಾರೆ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ. ಬಾಕಿ ವಸೂಲಿ ಮತ್ತು ವ್ಯಾಪಾರದಲ್ಲಿ ಗೊಂದಲ ಇರಬಾರದು ಎಂದಿದ್ದಾರೆ. ವಿದ್ಯಾರ್ಥಿಗಳು, ರೈತರು ಮತ್ತು ವ್ಯಾಪಾರಸ್ಥರಿಗೆ ಒಳ್ಳೆಯ ದಿನವಾಗಲಿದೆ. ಹಳದಿ ಬಣ್ಣ ಮತ್ತು ಉತ್ತರ ದಿಕ್ಕಿನ ಪ್ರಯಾಣ ಶುಭಕರ ಎಂದು ತಿಳಿಸಲಾಗಿದೆ.

ಬೆಂಗಳೂರು, ಜೂನ್​ 01: ಈ ದಿನದ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಅವರ ಪ್ರಕಾರ ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಬಾಕಿ ವಸೂಲಿ ಮತ್ತು ಇತರ ವಿಷಯಗಳಲ್ಲಿ ಗೊಂದಲ ಇರಬಾರದು. ವಿದ್ಯಾರ್ಥಿಗಳು, ರೈತರು ಮತ್ತು ವ್ಯಾಪಾರಸ್ಥರಿಗೆ ಈ ದಿನ ಉತ್ತಮ ಫಲಿತಾಂಶಗಳನ್ನು ತರುತ್ತದೆ. ಹಳದಿ ಬಣ್ಣವನ್ನು ಉಪಯೋಗಿಸುವುದು ಮತ್ತು ಉತ್ತರ ದಿಕ್ಕಿನ ಪ್ರಯಾಣಗಳು ಶುಭಕರ. ಐದು ಸಂಖ್ಯೆ ಈ ದಿನದ ಅದೃಷ್ಟ ಸಂಖ್ಯೆಯಾಗಿದೆ.

Published on: Jun 01, 2025 06:50 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More