Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ

Updated on: Jun 07, 2025 | 6:57 AM

ಜೂನ್ 7ರ ರಾಶಿ ಭವಿಷ್ಯವನ್ನು ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ರಾಶಿಗಳಿಗೆ ಈ ದಿನ ಯಾವ ರೀತಿಯ ಫಲಗಳು ಕಾದಿವೆ ಎಂಬುದನ್ನು ವಿಡಿಯೋದಲ್ಲಿ ತಿಳಿದುಕೊಳ್ಳಬಹುದು. ಪ್ರತಿಯೊಂದು ರಾಶಿಯವರಿಗೂ ಅದೃಷ್ಟ ಸಂಖ್ಯೆಗಳು, ಬಣ್ಣಗಳು ಮತ್ತು ದಿಕ್ಕುಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಬೆಂಗಳೂರು, ಜೂನ್​ 07: ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ಆರ್ಥಿಕ ಲಾಭ ಮತ್ತು ಆಸೆ ಈಡೇರಿಕೆ ಇರುತ್ತದೆ ಎಂದು ಹೇಳಿದ್ದಾರೆ. ಆದರೆ ಸಣ್ಣ ಆರೋಗ್ಯ ಸಮಸ್ಯೆಗಳು ಕಾಡಬಹುದು. ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಆಕಸ್ಮಿಕ ಧನಯೋಗ ಮತ್ತು ಗಂಡ-ಹೆಂಡತಿಯರ ನಡುವೆ ಅನ್ಯೋನ್ಯತೆ ಹೆಚ್ಚಾಗುವುದು, ಆದರೆ ಹಳೆಯ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಮಿಥುನ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಆದಾಯದಲ್ಲಿ ಏರಿಕೆ ಮತ್ತು ಆರ್ಥಿಕ ಪ್ರಗತಿ ಇರುತ್ತದೆ. ಹೀಗೆ ಪ್ರತಿಯೊಂದು ರಾಶಿಗಳ ಅದೃಷ್ಟ ಸಂಖ್ಯೆಗಳು, ಬಣ್ಣಗಳು ಮತ್ತು ಶುಭ ದಿಕ್ಕುಗಳನ್ನು ಸೂಚಿಸಲಾಗಿದೆ.

 

Published on: Jun 07, 2025 06:56 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More