Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ

Updated on: Apr 10, 2025 | 6:52 AM

ಏಪ್ರಿಲ್ 10, 2025 ರ ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ಮಂತ್ರಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಬೆಂಗಳೂರು, ಏಪ್ರಿಲ್​ 10: ಇಂದು ಗುರುವಾರ, ಉತ್ತರಾಯಣ ಸಂವತ್ಸರದ, ವಸಂತ ಋತು, ಮೀನ ಮಾಸ, ರೇವತಿ ಮಹಾನಕ್ಷತ್ರ, ಚೈತ್ರ ಮಾಸ, ಶುಕ್ಲ ಪಕ್ಷ. ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಕಲಹಕ್ಕೆ ಏನಾದರೂ ವಿಷಯವನ್ನು ಹುಡುಕಿಕೊಳ್ಳುವಿರಿ. ಅನಿರೀಕ್ಷಿತ ಧನಾಗಮನವು ಸಂತೋಷವನ್ನು ಕೊಡುವುದು. ಪರರ ಸೇವೆಗೆ ನಿಮ್ಮ‌ ಮನಸ್ಸು ಒಪ್ಪದು. ಮಕ್ಕಳ ಕಡೆಯಿಂದ ಆರ್ಥಿಕ ಸಹಾಯವನ್ನು ನಿರೀಕ್ಷಿಸುವಿರಿ.