ಮಹೇಶ್ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು, ಬೆಂಬಲಿಗರಿಂದ ಜೈಕಾರ ಮತ್ತು ಘೋಷಣೆಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Aug 21, 2025 | 11:38 AM

ಮಹೇಶ್ ತಿಮರೋಡಿ ಮನೆಗೆ ಪೊಲೀಸರು ಬಂದಾಗ ವಕೀಲರು ಅವರೊಂದಿಗೆ ಚರ್ಚೆ ನಡೆಸಿದರು, ತಮ್ಮ ಕಕ್ಷಿದಾರನನ್ನು ತಾವೇ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತರುವುದಾಗಿ ಆವರು ಹೇಳಿದಾಗ ಪೊಲೀಸರು ಸಮ್ಮತಿಸಲಿಲ್ಲ. ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ ನಡೆಯುತ್ತಿದ್ದಾಗೆ ತಿಮರೋಡಿ ಮನೆಯಲ್ಲಿದ್ದರು. ಕೊನೆಗೆ ಪೊಲೀಸರು ಅರೆಸ್ಟ್ ವಾರಂಟ್ ಅನ್ನು ವಕೀಲರಿಗೆ ತೋರಿಸಿ ತಿಮರೋಡಿಯನ್ನು ತಮ್ಮೊಂದಿಗೆ ಕರೆದೊಯ್ದರು.

ಮಂಗಳೂರು, ಆಗಸ್ಟ್ 21: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ತಮ್ಮ ನಿವಾಸದಿಂದ ಮಹೇಶ್ ತಿಮರೋಡಿಯನ್ನು (Mahesh Timarodi) ಪೊಲೀಸರು ವಶಕ್ಕೆ ಪಡೆದು ವ್ಯಾನಲ್ಲಿ ತಮ್ಮೊಂದಿಗೆ ಕರೆದೊಯ್ದರು. ಪೊಲೀಸರು ತಿಮರೋಡಿ ಮನೆಗೆ ಬಂದಾಗ ಅಲ್ಲಿ ನೆರೆದಿದ್ದ ಬೆಂಬಲಿಗರು ಅವರ ಪರ ಘೋಷಣೆಗಳನ್ನು ಕೂಗಿದರು. ಹಿರಿಯ ಬಿಜೆಪಿ ನಾಯಕ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ತಿಮರೋಡಿಯನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಅಂದರೆ ಬುಧವಾರ ತಿಮರೋಡಿಯವರು ಸಂತೋಷ್ ಸೇರಿದಂತೆ ಹಲವು ಜನರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದರು.

ಇದನ್ನೂ ಓದಿ:  ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತಿಲ, ಭರತ್ ಕುಮ್ಡೇಲು, ಮಹೇಶ್ ಶೆಟ್ಟಿ ತಿಮರೋಡಿ ಸೇರಿ 36 ಜನರ ಗಡೀಪಾರಿಗೆ ಪ್ರಕ್ರಿಯೆ ಶುರು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.