ಮಂಗಳೂರು: ಫ್ಯಾಷನ್ ಪ್ಯಾಂಟ್​ ಧರಿಸಿದವನ ಹಿಡಿದಿಟ್ಟು ಹೊಲಿಗೆ ಹಾಕಿದ ಪುಂಡರು: ವಿಡಿಯೋ ವೈರಲ್ ಆದ ಬೆನ್ನಲ್ಲೇ ಯುವಕ ಆತ್ಮಹತ್ಯೆಗೆ ಯತ್ನ

Edited By: ವಿವೇಕ ಬಿರಾದಾರ

Updated on: Nov 22, 2024 | 12:28 PM

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಮಾರುಕಟ್ಟೆಗೆ ವಿನೂತನ ಶೈಲಿಯಲ್ಲಿ (ಹರಿದ ಜೀನ್ಸ್​) ಪ್ಯಾಂಟ್ ಧರಿಸಿ ಬಂದಿದ್ದ ಯುವಕನ ಪ್ಯಾಂಟಿಗೆ ಪುಂಡರು ಡಬ್ಬಣದಿಂದ ಹೊಲಿಗೆ ಹಾಕಿದ್ದಾರೆ. ಇದರಿಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೊಲಿಗೆ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮಂಗಳೂರು, ನವೆಂಬರ್​ 22: ದಕ್ಷಿಣ ಕನ್ನಡ (Dakshin Kannada) ಜಿಲ್ಲೆ ಬೆಳ್ತಂಗಡಿಯ ಮಾರುಕಟ್ಟೆಗೆ ಯುವಕನ ಪ್ಯಾಂಟಿಗೆ ಪುಂಡರು ಡಬ್ಬಣದಿಂದ ಹೊಲಿಗೆ ಹಾಕಿದ್ದಾರೆ. ಪುಂಡರು ಪ್ಯಾಂಟಿಗೆ ಹೊಲಿಗೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಗುರುವಾರ ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ವಿನೂತನ ಶೈಲಿಯ (ಹರಿದ ಜೀನ್ಸ್​) ಪ್ಯಾಂಟ್ ಧರಿಸಿ ಬಂದಿದ್ದನು. ಈ ವೇಳೆ, ಮಾರುಕಟ್ಟೆಯಲ್ಲಿದ್ದ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್, ಅನೀಶ್ ಪಣಕಜೆ, ಬಾಬ್ ಜಾನ್ ಸಾಹೇಬ್, ಶಾಹಿಲ್​ನನ್ನು ಅಡ್ಡ ಹಾಕಿದ್ದಾರೆ. ಬಳಿಕ ಶಾಹಿಲ್​ ಅವರ ಎರಡೂ ಕೈಗಳನ್ನು ಲಾಕ್​ ಮಾಡಿದ್ದಾರೆ. ನಂತರ, ಶಾಹಿಲ್​ ಪ್ಯಾಂಟಿಗೆ ಡಬ್ಬಣದಿಂದ ಹೊಲಿಗೆ ಹಾಕಿದ್ದಾರೆ.

ಹೊಲಿಗೆ ಹಾಕುತ್ತಿದ್ದ ದೃಶ್ಯವನ್ನು ತಮ್ಮ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದರಿಂದ ಮನನೊಂದ ಶಾಹಿಲ್​ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಶಾಹಿಲ್​ ಜೀವನ್ಮರಣ ಹೋರಾಟ ನಡೆಸಿದ್ದಾನೆ.

Published on: Nov 22, 2024 12:17 PM
Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More