AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ: ಶಾಲೆ, ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ: ಶಾಲೆ, ಕಾಲೇಜುಗಳಿಗೆ ರಜೆ

ಗಣಪತಿ ಶರ್ಮಾ
|

Updated on:Jul 23, 2026 | 3:09 PM

Share

Dakshina Kannada School College Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆಯಿಂದಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್‌ ಜಾರಿಯಲ್ಲಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

ಮಂಗಳೂರು, ಜುಲೈ 23: ಕರ್ನಾಟಕದ ಹಲವೆಡೆ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇಂದು (ಜುಲೈ 23) ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.

ಹಲವು ದಿನಗಳಿಂದ ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭೂಕುಸಿತ ಮತ್ತು ಪ್ರವಾಹದ ಭೀತಿಯನ್ನು ಹೆಚ್ಚಿಸಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 23, 2026 06:33 AM

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More