AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ ಗೊತ್ತಾ?

ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ ಗೊತ್ತಾ?

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Nov 24, 2026 | 9:49 AM

Share

ಕೋಲಾರದ ಅಂತರಗಂಗೆಯು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿದೆ. ಇಲ್ಲಿ ಕಾಶಿ ವಿಶ್ವೇಶ್ವರ ಸ್ವಾಮಿ ನೆಲೆಸಿದ್ದು, ಕಾಶಿಯಿಂದ ಗಂಗೆಯು ಗುಪ್ತಗಾಮಿನಿಯಾಗಿ ಬಸವನ ಬಾಯಿಯಲ್ಲಿ ವರ್ಷವಿಡೀ ಹರಿಯುತ್ತದೆ ಎಂಬ ಪ್ರತೀತಿ ಇದೆ. ಕಾರ್ತಿಕ ಮಾಸದಲ್ಲಿ ವಿಶೇಷ ಪೂಜೆಗಳು, ಲಕ್ಷದೀಪೋತ್ಸವ, ಜಾತ್ರೆಗಳು ನಡೆಯುತ್ತವೆ. ಇದು ದ್ವಾಪರ ಯುಗದ ಮುಚುಕುಂದ ಮುನಿಗಳ ಇತಿಹಾಸ ಹೊಂದಿದೆ.

ಕೋಲಾರದಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳ ಅಂತರಗಂಗೆಯು ತನ್ನ ಪ್ರಾಚೀನ ಇತಿಹಾಸ ಮತ್ತು ಪೌರಾಣಿಕ ಹಿನ್ನೆಲೆಯಿಂದಾಗಿ ಭಕ್ತರ ಗಮನ ಸೆಳೆದಿದೆ. ಇದನ್ನು ರಾಜ್ಯದ ದಕ್ಷಿಣ ಕಾಶಿ ಎಂದೇ ಗುರುತಿಸಲಾಗುತ್ತದೆ. ಶತಶೃಂಗ ಪರ್ವತ ಶ್ರೇಣಿಯಲ್ಲಿ ನೆಲೆಸಿರುವ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿಯ ದೇವಸ್ಥಾನವು ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಈ ಕ್ಷೇತ್ರದ ವಿಶೇಷತೆ ಏನೆಂದರೆ, ಇಲ್ಲಿ ಕಾಶಿಯಿಂದ ಗಂಗೆಯು ವರ್ಷದ 365 ದಿನಗಳೂ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಎಂಬ ನಂಬಿಕೆ ಇದೆ. ಬಸವನ ಬಾಯಿಯಿಂದ ನಿರಂತರವಾಗಿ ಹರಿಯುವ ಈ ಗಂಗೆಯಲ್ಲಿ ಸ್ನಾನ ಮಾಡಿ ಕಾಶಿ ವಿಶ್ವೇಶ್ವರ ಸ್ವಾಮಿಯ ದರ್ಶನ ಪಡೆದರೆ, ಕಾಶಿಗೆ ಭೇಟಿ ನೀಡಿದಷ್ಟೇ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಭಕ್ತರು ನಂಬುತ್ತಾರೆ. ಕಾರ್ತಿಕ ಮಾಸದಲ್ಲಿ ಇಲ್ಲಿ ವಿಶೇಷ ಪೂಜೆಗಳು, ಲಕ್ಷದೀಪೋತ್ಸವ ಮತ್ತು ಜಾತ್ರೆಗಳು ವಿಜೃಂಭಣೆಯಿಂದ ನಡೆಯುತ್ತವೆ. ಈ ಸಮಯದಲ್ಲಿ ಲಕ್ಷಾಂತರ ಭಕ್ತರು ರಾಜ್ಯದ ಮೂಲೆ ಮೂಲೆಗಳಿಂದ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

 

Published on: Nov 24, 2026 09:48 AM

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More