ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳಿಂದ ಇಂದು ಬಾಗಲಕೋಟೆ ನಗರ ಬಂದ್!

ಅರುಣ್​ ಕುಮಾರ್​ ಬೆಳ್ಳಿ

Updated on: Jan 20, 2025 | 10:59 AM

ಬಂದ್ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾಡಳಿತ ತಕ್ಕ ಮುನ್ನೆಚ್ಚರಿಕೆಕ ಕ್ರಮಗಳನ್ನು ಜಾರಿಗೊಳಿಸಿದೆ. ನಗರದ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ರಜೆ ಘೋಷಿಸಲಾಗಿದೆ. ನಗರದ ಯಾವುದೇ ಭಾಗದಲ್ಲಿ ಅಹಿತಕರ ಘಟನೆ ಜರುಗದಂತೆ ಪೊಲೀಸರನ್ನು ನಿಯೋಜಿಸಲಾಗಿದೆ. ಅಮಿತ್ ಶಾ ಅವರ ಹೇಳಿಕೆಯ ನಂತರ ರಾಜ್ಯದ ಎಲ್ಲ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಬಂದ್​ಗಳು ಜರುಗುತ್ತಲೇ ಇವೆ.

ಬಾಗಲಕೋಟೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಅಧಿವೇಶನ ನಡೆಯುತ್ತಿದ್ದಾಗ ಸಂವಿಧಾನ ಶಿಲ್ಪಿ ಡಾ ಬಿಅರ್ ಅಂಬೇಡ್ಕರ್ ಬಗ್ಗೆ ಮಾತಾಡಿದ್ದನ್ನು ಖಂಡಿಸಿ ದಲಿತ ಸಂಘಟನೆಗಳು ಇಂದು ಬಾಗಲಕೋಟೆ ನಗರ ಬಂದ್ ಗೆ ಕರೆ ನೀಡಿವೆ. ಬಂದ್ ಪ್ರಯುಕ್ತ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಗಳ ಆಗಮನವಿಲ್ಲದೆ ಜನ ಪರದಾಡುವ ಸ್ಥಿತಿ ನಿರ್ಮಾಣವಾಯಿತು. ನಗರದ ರಸ್ತೆಗಳು ಜನಸಂಚಾರವಿಲ್ಲದೆ ಬೀಕೋ ಅನ್ನುತ್ತಿವೆ. ಆಟೋರಿಕ್ಷಾ ಮತ್ತು ಇತರ ಸಾರಿಗೆ ಸಾಧನಗಳು ರಸ್ತೆಯಿಂದ ದೂರವುಳಿದಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳು ನೀಡಿರುವ ಮೈಸೂರು ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.