ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ: ದೇವಸ್ಥಾನದಿಂದ ಎತ್ತಿ ಹೊರಹಾಕಿದ ಟ್ರಸ್ಟಿಗಳು

Edited By:

Updated on: Apr 06, 2026 | 6:38 PM

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿರುವ ಮಾತಾ ಮಾಣಿಕೇಶ್ವರಿ ದೇವಸ್ಥಾನದಲ್ಲಿ ದಲಿತ ಸ್ವಾಮೀಜಿ ಬಂಡಿ ಬಾಲಕೃಷ್ಣ ಅವರಿಗೆ ಟ್ರಸ್ಟಿಗಳಿಂದ ಹಲ್ಲೆ ನಡೆದಿದೆ. ಜಾತಿ ಕಾರಣಕ್ಕೆ ಸ್ವಾಮೀಜಿಯನ್ನು ದೇಗುಲದಿಂದ ಹೊರಗೆ ಎಳೆದು ಥಳಿಸಲಾಗಿದ್ದು, ಜಾತಿ ನಿಂದನೆ ಆರೋಪ ಕೇಳಿಬಂದಿದೆ. ಏಳೆಂಟು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸ್ವಾಮೀಜಿ ಮೇಲೆ ಇದೇ ಮೊದಲಲ್ಲ. ಈ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕಲಬುರಗಿ, ಏಪ್ರಿಲ್​ 06: ದಲಿತ ಎಂಬ ಕಾರಣಕ್ಕೆ ಸ್ವಾಮೀಜಿ ಮೇಲೆ ಹಲ್ಲೆ ಮಾಡಿ, ದೇಗುಲದಿಂದ ಹೊರಗೆ ಹಾಕಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿ ನಡೆದಿದೆ. ಮಾತಾ ಮಾಣಿಕೇಶ್ವರಿ ದೇವಸ್ಥಾನದಲ್ಲಿ ಟ್ರಸ್ಟಿಗಳಿಂದ ತೆಲಂಗಾಣ ಮೂಲದ ಬಂಡಿ ಬಾಲಕೃಷ್ಣ ಎಂಬುವರನ್ನು ಎಳೆದಾಡಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ವಾಮೀಜಿ ಕಳೆದ 7-8 ವರ್ಷಗಳಿಂದ ದೇವಸ್ಥಾನದಲ್ಲಿ ನೆಲೆಸಿ ಸೇವೆ ಸಲ್ಲಿಸುತ್ತಿದ್ದರು. ಕೆಳಜಾತಿಯವರು ದೇವಸ್ಥಾನ ಪ್ರವೇಶಿಸಬಾರದು ಎಂದು ನಿಂದಿಸಿ ಹಲವು ಬಾರಿ ಹಲ್ಲೆ ಮಾಡಿದ್ದಾರೆ. ಟ್ರಸ್ಟ್​ನ ಕಾರ್ಯದರ್ಶಿ ಶಿವಯ್ಯ ಮತ್ತು ಪುತ್ರ ಸುಮನ್ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 06, 2026 06:37 PM
Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More