ಮನೆಗಳ ಮುಂದೆ ನಿಲ್ಲಿಸಿದ್ದ ಬೈಕ್​​ಗಳನ್ನು ಬೀಳಿಸಿ ಕಿಡಿಗೇಡಿಯ ಪುಂಡಾಟ

Edited By: ವಿವೇಕ ಬಿರಾದಾರ

Updated on: Jan 09, 2024 | 7:24 AM

ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದೆ. ಸೋಮವಾರ (ಜ.08) ರಾತ್ರಿ 8 ಗಂಟೆ ಸುಮಾರಿಗೆ ಕಿಡಿಗೇಡಿ ಕುಡಿದ ಮತ್ತಿನಲ್ಲಿ ಪ್ರಕಾಶ್​​​ ನಗರದ ಕುವೆಂಪು ಮೆಟ್ರೋ ನಿಲ್ದಾಣ ಬಳಿಯ ಮನೆ ಮುಂದೆ ಮತ್ತು ಲೇಡಿಸ್​ ಪಿಜಿ ಎದುರು ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟಿಯನ್ನು ಬೀಳಿಸಿ ಅಟ್ಟಹಾಸ ಮೆರೆದಿದ್ದಾರೆ.

ಬೆಂಗಳೂರು, ಜನವರಿ 09: ನಗರದಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದೆ. ಸೋಮವಾರ (ಜ.08)ರ ರಾತ್ರಿ 8 ಗಂಟೆ ಸುಮಾರಿಗೆ ಕಿಡಿಗೇಡಿ ಕುಡಿದ ಮತ್ತಿನಲ್ಲಿ ಪ್ರಕಾಶ್​​​ ನಗರದ ಕುವೆಂಪು ಮೆಟ್ರೋ ನಿಲ್ದಾಣ (Metro Station) ಬಳಿಯ ಮನೆ ಮುಂದೆ ಮತ್ತು ಲೇಡಿಸ್​ ಪಿಜಿ ಎದುರು ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟಿಯನ್ನು ಬೀಳಿಸಿ ಅಟ್ಟಹಾಸ ಮೆರೆದಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಬ್ರಹ್ಮಣ್ಯನಗರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More