ಸೂಪರ್ ಮಾಮ್ ರಿಯಾಲಿಟಿ ಶೋ ಆಡಿಷನ್ ವಿವರ ಇಲ್ಲಿದೆ

Updated on: Jul 24, 2026 | 12:42 PM

ಮಹಿಳೆಯರ ಸುಪ್ತ ನೃತ್ಯ ಪ್ರತಿಭೆಯನ್ನು ಅನಾವರಣಗೊಳಿಸಲು ಜೀ ಕನ್ನಡ ವಾಹಿನಿಯು ಮತ್ತೊಮ್ಮೆ ಅದ್ಭುತ ವೇದಿಕೆಯನ್ನು ಸಿದ್ಧಪಡಿಸಿದೆ. ಬಹುನಿರೀಕ್ಷಿತ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ - ಸೂಪರ್ ಮಾಮ್’ ಕಾರ್ಯಕ್ರಮದ ಹೊಸ ಸೀಸನ್‌ನ ಆಡಿಷನ್ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಕರ್ನಾಟಕದ ಒಟ್ಟು 18 ಪ್ರಮುಖ ಜಿಲ್ಲೆಗಳಲ್ಲಿ ಈ ಆಡಿಷನ್‌ಗಳು ನಡೆಯಲಿವೆ.

ಮಹಿಳೆಯರಿಗಾಗಿ ‘ಸೂಪರ್ ಮಾಮ್’ ಹೆಸರಿನ ರಿಯಾಲಿಟಿ ಶೋನ ಜೀ ಕನ್ನಡ ವಾಹಿನಿ ತರುತ್ತಿದೆ. ಇದಕ್ಕೆ ಕರ್ನಾಟಕದ ಒಟ್ಟು 18 ಪ್ರಮುಖ ಜಿಲ್ಲೆಗಳಲ್ಲಿ ಈ ಆಡಿಷನ್‌ಗಳು ನಡೆಯಲಿವೆ. ಎಲ್ಲೆಲ್ಲಿ ಆಡಿಷನ್ ನಡೆಯಲಿದೆ ಎಂಬ ವಿವರವನ್ನು ಜೀ ಕನ್ನಡ ವಾಹಿನಿ ನೀಡಿದೆ. ಜುಲೈ 24 ಅಂದರೆ ಇಂದು ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಆಡಿಷನ್ ಆಯೋಜಿಸಲಾಗಿದೆ. ಜುಲೈ 25ರಂದು ಮಂಗಳೂರು ಹಾಗೂ ಕೊಪ್ಪಳದ ಭಾಗದಲ್ಲಿ ಆಡಿಷನ್‌ಗಳನ್ನು ಹಮ್ಮಿಕೊಳ್ಳಲಾಗಿದೆ. ಜುಲೈ 26 ಕ್ಕೆ ಉಡುಪಿ ಹಾಗೂ ದಾವಣಗೆರೆಯಲ್ಲಿ ಆಡಿಷನ್ ನಡೆಯಲಿದೆ.

ಆಡಿಷನ್‌ನಲ್ಲಿ ಭಾಗವಹಿಸಲು ಇಚ್ಛಿಸುವ ತಾಯಂದಿರು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯ ಒಳಗಾಗಿ ನಿಗದಿಪಡಿಸಿದ ಸ್ಥಳಕ್ಕೆ ಭೇಟಿ ನೀಡಬೇಕು. ಆಡಿಷನ್ ನೀಡುವ ಸಮಯದಲ್ಲಿ ಸ್ಪರ್ಧಿಗಳು ತಮ್ಮ ಒಂದು ಪಾಸ್‌ಪೋರ್ಟ್ ಸೈಜ್ ಫೋಟೋ ಮತ್ತು ಅಡ್ರೆಸ್ ಪ್ರೂಫ್ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕಾಗಿ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಚ್ಛಿಸುವವರು 9513134434 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 24, 2026 12:42 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More