ಪುಂಡರ ಅಟ್ಟಹಾಸ ನೋಡಿ! ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಚೆನ್ನೈ ಎಕ್ಸ್ಪ್ರೆಸ್ ವೇನಲ್ಲಿ ವ್ಹೀಲಿಂಗ್
ರಂಜಾನ್ ಹಬ್ಬಕ್ಕೆ ಲಾಂಗ್ ಡ್ರೈವ್ ಹೋಗುತ್ತೇವೆ ಎಂದುಕೊಂಡು ಕೆಲ ಪುಂಡರು ಹೊಸಕೋಟೆ ಸಮೀಪದ ಚೆನ್ನೈ ಎಕ್ಸ್‌ಪ್ರೆಸ್‌ವೇಗೆ ಬಂದು ಅಪಾಯಕಾರಿ ವ್ಹೀಲಿಂಗ್ ಹಾಗೂ ಸ್ಟಂಟ್ ಮಾಡಿದ ಘಟನೆ ನಡೆದಿದೆ. ಸದ್ಯ ಅಪಾಯಕಾರಿ ವ್ಹೀಲಿಂಗ್ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಸ್ಥಳಕ್ಕೆ ಧಾವಿಸಿದ ಹೊಸಕೋಟೆ ಸಂಚಾರಿ ಪೊಲೀಸರು ಐದು ಮಂದಿಯನ್ನು ಬಂಧಿಸಿ ಬೈಕ್, ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಇಲ್ಲಿದೆ.
ದೇವನಹಳ್ಳಿ, ಮಾರ್ಚ್ 19: ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಿನಲ್ಲಿ ಬಂದ ಕೆಲ ಯುವಕರು ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡಿ ಅಟ್ಟಹಾಸ ಮೆರೆದ ಘಟನೆ ಬೆಳಕಿಗೆ ಬಂದಿದೆ. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಹೆದ್ದಾರಿಯ ಮಧ್ಯೆಯೇ ಗುಂಪು ಗುಂಪಾಗಿ ಬೈಕ್‌ಗಳನ್ನು ನಿಲ್ಲಿಸಿ ವ್ಹೀಲಿಂಗ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂಜಾನೆ ಹೊಸಕೋಟೆ ಸಮೀಪದ ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ನಡೆದಿದ್ದು, ವಾಹನಗಳ ಸಂಚಾರ ಮಧ್ಯೆಯೇ ಒಂದೇ ರಸ್ತೆಯಲ್ಲಿ ಎರಡೂ ಕಡೆಯಿಂದ ವ್ಹೀಲಿಂಗ್ ನಡೆಸಲಾಗಿದೆ. ಕೆಲವರು ಆಟೋ, ಆರ್‌ಎಕ್ಸ್ ಮತ್ತು ಡಿಯೋ ಬೈಕ್‌ಗಳಲ್ಲಿ ಅಪಾಯಕಾರಿಯಾಗಿ ಸ್ಟಂಟ್ ಮಾಡಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ ಹೊಸಕೋಟೆ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದ ವೇಳೆ, ಕೆಲವರು ಬೈಕ್‌ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು 7 ಬೈಕ್‌ಗಳು, 2 ಕಾರುಗಳನ್ನು ವಶಕ್ಕೆ ಪಡೆದು, ಐದು ಮಂದಿಯನ್ನು ಬಂಧಿಸಿದ್ದಾರೆ.
ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪುಂಡರು ಚಿತ್ರೀಕರಿಸಿದ ವಿಡಿಯೋಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published on: Mar 19, 2026 02:38 PM
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

