ಪುಂಡರ ಅಟ್ಟಹಾಸ ನೋಡಿ! ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಚೆನ್ನೈ ಎಕ್ಸ್​ಪ್ರೆಸ್ ವೇನಲ್ಲಿ ವ್ಹೀಲಿಂಗ್

Edited By:

Updated on: Mar 19, 2026 | 2:39 PM

ರಂಜಾನ್ ಹಬ್ಬಕ್ಕೆ ಲಾಂಗ್ ಡ್ರೈವ್ ಹೋಗುತ್ತೇವೆ ಎಂದುಕೊಂಡು ಕೆಲ ಪುಂಡರು ಹೊಸಕೋಟೆ ಸಮೀಪದ ಚೆನ್ನೈ ಎಕ್ಸ್‌ಪ್ರೆಸ್‌ವೇಗೆ ಬಂದು ಅಪಾಯಕಾರಿ ವ್ಹೀಲಿಂಗ್ ಹಾಗೂ ಸ್ಟಂಟ್ ಮಾಡಿದ ಘಟನೆ ನಡೆದಿದೆ. ಸದ್ಯ ಅಪಾಯಕಾರಿ ವ್ಹೀಲಿಂಗ್ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಸ್ಥಳಕ್ಕೆ ಧಾವಿಸಿದ ಹೊಸಕೋಟೆ ಸಂಚಾರಿ ಪೊಲೀಸರು ಐದು ಮಂದಿಯನ್ನು ಬಂಧಿಸಿ ಬೈಕ್, ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಇಲ್ಲಿದೆ.

ದೇವನಹಳ್ಳಿ, ಮಾರ್ಚ್​ 19: ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಿನಲ್ಲಿ ಬಂದ ಕೆಲ ಯುವಕರು ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡಿ ಅಟ್ಟಹಾಸ ಮೆರೆದ ಘಟನೆ ಬೆಳಕಿಗೆ ಬಂದಿದೆ. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಹೆದ್ದಾರಿಯ ಮಧ್ಯೆಯೇ ಗುಂಪು ಗುಂಪಾಗಿ ಬೈಕ್‌ಗಳನ್ನು ನಿಲ್ಲಿಸಿ ವ್ಹೀಲಿಂಗ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂಜಾನೆ ಹೊಸಕೋಟೆ ಸಮೀಪದ ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ನಡೆದಿದ್ದು, ವಾಹನಗಳ ಸಂಚಾರ ಮಧ್ಯೆಯೇ ಒಂದೇ ರಸ್ತೆಯಲ್ಲಿ ಎರಡೂ ಕಡೆಯಿಂದ ವ್ಹೀಲಿಂಗ್ ನಡೆಸಲಾಗಿದೆ. ಕೆಲವರು ಆಟೋ, ಆರ್‌ಎಕ್ಸ್ ಮತ್ತು ಡಿಯೋ ಬೈಕ್‌ಗಳಲ್ಲಿ ಅಪಾಯಕಾರಿಯಾಗಿ ಸ್ಟಂಟ್ ಮಾಡಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಹೊಸಕೋಟೆ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದ ವೇಳೆ, ಕೆಲವರು ಬೈಕ್‌ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು 7 ಬೈಕ್‌ಗಳು, 2 ಕಾರುಗಳನ್ನು ವಶಕ್ಕೆ ಪಡೆದು, ಐದು ಮಂದಿಯನ್ನು ಬಂಧಿಸಿದ್ದಾರೆ.

ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪುಂಡರು ಚಿತ್ರೀಕರಿಸಿದ ವಿಡಿಯೋಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 19, 2026 02:38 PM
Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More