ಭಾರಿ ಮಳೆಗೆ ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ!
ಪಶ್ಚಿಮ ಬಂಗಾಳದ ಪರ್ವತ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಡಾರ್ಜಿಲಿಂಗ್ ಮತ್ತು ಸಿಲಿಗುರಿ ನಡುವಿನ ಪ್ರಮುಖ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೇವಲ ಕೆಲವೇ ಗಂಟೆಗಳಲ್ಲಿ ಬರೋಬ್ಬರಿ 200 ಮಿಲಿಮೀಟರ್‌ನಷ್ಟು ದಾಖಲೆ ಪ್ರಮಾಣದ ಮಳೆ ಸುರಿದ ಪರಿಣಾಮ, ಪ್ರಸಿದ್ಧ ಪ್ರವಾಸಿ ತಾಣವಾದ ದುಧಿಯಾ ಸೇತುವೆಯು ನೀರಿನ ರಭಸಕ್ಕೆ ಕೊಚ್ಚಿಹೋಗಿದೆ.
ಡಾರ್ಜಿಲಿಂಗ್, ಜೂನ್ 19: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಸುತ್ತಮುತ್ತಲಿನ ಬೆಟ್ಟ ಪ್ರದೇಶಗಳಲ್ಲಿ ದಿಢೀರ್ ಪ್ರಕೃತಿ ವಿಕೋಪ ಸಂಭವಿಸಿದೆ. ಒಂದೇ ಸಮನೆ ಸುರಿದ 200 ಮಿಮೀ ಭಾರಿ ಮಳೆಯಿಂದಾಗಿ (Rain Updates) ಗುಡ್ಡಗಾಡು ಪ್ರದೇಶದ ನದಿಗಳು ಮತ್ತು ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನೀರಿನ ತೀವ್ರ ರಭಸಕ್ಕೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಿಲಿಗುರಿ ಮತ್ತು ಮಿರಿಕ್-ಡಾರ್ಜಿಲಿಂಗ್ ಅನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿರುವ ಪ್ರಮುಖ ‘ದುಧಿಯಾ ಸೇತುವೆ’ ಪ್ರವಾಹಕ್ಕೆ ಸಿಲುಕಿ ಸಂಪೂರ್ಣವಾಗಿ ಕೊಚ್ಚಿಹೋಗಿದೆ.
ಸೇತುವೆ ಕೊಚ್ಚಿಹೋಗಿರುವುದು ಮತ್ತು ಹೆದ್ದಾರಿಯ ಹಲವೆಡೆ ಭಾರಿ ಭೂಕುಸಿತ ಸಂಭವಿಸಿರುವುದರಿಂದ ಡಾರ್ಜಿಲಿಂಗ್-ಸಿಲಿಗುರಿ ನಡುವಿನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಮಾರ್ಗದಲ್ಲಿ ನೂರಾರು ವಾಹನಗಳು ಮತ್ತು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಅಧಿಕಾರಿಗಳು ಪ್ರವಾಸಿಗರಿಗೆ ಸದ್ಯಕ್ಕೆ ಈ ಮಾರ್ಗದಲ್ಲಿ ಪ್ರಯಾಣಿಸದಂತೆ ಮುನ್ನೆಚ್ಚರಿಕೆ ನೀಡಿದ್ದಾರೆ.
(Video Source: ANI)
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ ಕ್ಷಣ ಮಾತ್ರದಲ್ಲಿ ಸಾವು!

