Milana Nagaraj: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಕ್ಕೆ ಜನಮೆಚ್ಚುಗೆ; ಮೆಟ್ರೋದಲ್ಲಿ ಜನರ ಜತೆ ಪ್ರಯಾಣಿಸಿದ ಕೃಷ್ಣ-ಮಿಲನಾ
Kausalya Supraja Rama: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ಪೇಯ್ಡ್ ಪ್ರೀಮಿಯರ್ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈ ಖುಷಿಯಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ಬೆಂಗಳೂರು ಮೆಟ್ರೋದಲ್ಲಿ ಜನರ ಜೊತೆ ಪ್ರಯಾಣ ಮಾಡಿದ್ದಾರೆ.
ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಆದಂತಹ ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಮಿಲನಾ ನಾಗರಾಜ್ ಅವರು ‘ಕೌಸಲ್ಯ ಸುಪ್ರಜಾ ರಾಮ’ (Kausalya Supraja Rama) ಸಿನಿಮಾದಲ್ಲಿ ನಟಿಸಿದ್ದಾರೆ. ಶುಕ್ರವಾರ (ಜುಲೈ 28) ಈ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಈ ಸಿನಿಮಾದ ಪೇಯ್ಡ್ ಪ್ರೀಮಿಯರ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈ ಖುಷಿಯಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ (Milana Nagaraj) ಅವರು ಬೆಂಗಳೂರು ಮೆಟ್ರೋದಲ್ಲಿ ಜನರ ಜೊತೆ ಪ್ರಯಾಣ ಮಾಡಿದ್ದಾರೆ. ಆ ಮೂಲಕ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಭರ್ಜರಿ ಪ್ರಚಾರ ನೀಡಿದ್ದಾರೆ. ಈ ಸಿನಿಮಾಗೆ ‘ಮೊಗ್ಗಿನ ಮನಸು’ ಖ್ಯಾತಿಯ ಶಶಾಂಕ್ ಅವರು ನಿರ್ದೇಶನ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.