‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು ದೇಶಪಾಂಡೆ

Edited By:

Updated on: Mar 26, 2026 | 8:44 AM

ಗುರು ದೇಶಪಾಂಡೆ ಅವರು ಈಗ ಗಂಭೀರ ಆರೋಪ ಮಾಡಿದ್ದಾರೆ. ‘ಲವ್ ಮಾಕ್ಟೇಲ್ 3’ ಸಿನಿಮಾದ ಕಥೆ ತಮ್ಮದು ಎಂದು ಅವರು ಹೇಳಿದ್ದಾರೆ. ರಾಘವೇಂದ್ರ ನಾಯ್ಕೆ ಅವರು ಈ ವಿಷಯವಾಗಿ ಮಾತನಾಡಿದ್ದಾರೆ. ಅವರು ಕೆಲವು ಗಂಭೀರ ಆರೋಪಗಳನ್ನು ಕೂಡ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

‘ಲವ್ ಮಾಕ್ಟೇಲ್ 3’ ಚಿತ್ರದ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಡಾರ್ಲಿಂಗ್ ಕೃಷ್ಣ ಕಥೆ ಕದ್ದಿದ್ದಾರೆ ಎಂದು ನಿರ್ದೇಶಕ ರಾಘವೇಂದ್ರ ನಾಯ್ಕ್ ಹಾಗೂ ನಿರ್ಮಾಪಕ, ನಿರ್ದೇಶಕ ಗುರು ದೇಶಪಾಂಡೆ ಆರೋಪಿಸಿದ್ದಾರೆ. ಆದರೆ, ಈ ಆರೋಪ ಸುಳ್ಳು ಎಂದು ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ ನೀಡಿದ್ದರು. ರಾಘವೇಂದ್ರ ಹಾಗೂ ಗುರು ಅವರನ್ನು ಟೀಕಿಸಿದ್ದರು. ಇದು ಗುರು ದೇಶಪಾಂಡೆಗೆ ನೋವು ತಂದಿದೆ. ‘ಕೃಷ್ಣ ಮೊದಲು ಹೀಗಿರಲಿಲ್ಲ. ದಿನಕ್ಕೆ ಅವರು ಒಂದು ಗಂಟೆ ಕರೆಮಾಡಿ ಮಾತನಾಡುತ್ತಿದ್ದರು. ಲವ್ ಮಾಕ್ಟೇಲ್ ಸಕ್ಸಸ್ ಸಿಕ್ಕಮೇಲೆ ಅವರು ಬದಲಾದರು’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 26, 2026 08:26 AM
Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More