RCB ಮ್ಯಾಚ್ ರೀತಿ ‘ಬ್ರ್ಯಾಟ್’ ಸಿನಿಮಾ ಎಂಜಾಯ್ ಮಾಡಿದ ಜನ: ಕೃಷ್ಣ ಫುಲ್ ಖುಷ್

Updated on: Oct 31, 2025 | 7:20 PM

ಶಶಾಂಕ್ ನಿರ್ದೇಶನ ಮಾಡಿರುವ ‘ಬ್ರ್ಯಾಟ್’ ಸಿನಿಮಾದಲ್ಲಿ ಕ್ರಿಕೆಟ್ ಮತ್ತು ಬೆಟ್ಟಿಂಗ್ ಕುರಿತ ಕಥೆ ತೋರಿಸಲಾಗಿದೆ. ‘ಕುಟುಂಬದ ಸದಸ್ಯರ ಜೊತೆ ಬಂದು ನಮ್ಮ ಚಿತ್ರವನ್ನು ನೋಡಿ’ ಎಂದು ಡಾರ್ಲಿಂಗ್ ಕೃಷ್ಣ ಅವರು ಹೇಳಿದ್ದಾರೆ. ಪೇಯ್ಡ್ ಪ್ರೀಮಿಯರ್ ಹಾಗೂ ಮೊದಲ ದಿನದ ಶೋಗಳಿಗೆ ಪ್ರೇಕ್ಷಕರಿಂದ ಅತ್ಯುತ್ತಮವಾದ ಪ್ರತಿಕ್ರಿಯೆ ಸಿಕ್ಕಿದೆ.

ಡಾರ್ಲಿಂಗ್ ಕೃಷ್ಣ ನಟನೆಯ ‘ಬ್ರ್ಯಾಟ್’ ಸಿನಿಮಾ (Brat Movie) ಬಿಡುಗಡೆ ಆಗಿದೆ. ಅಕ್ಟೋಬರ್ 31ರಂದು ತೆರೆಕಂಡ ಈ ಚಿತ್ರಕ್ಕೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಮೊದಲ ದಿನವೇ ಡಾರ್ಲಿಂಗ್ ಕೃಷ್ಣ ಅವರು ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ನೋಡಿದ್ದಾರೆ. ಪ್ರೇಕ್ಷಕರ ಪ್ರತಿಕ್ರಿಯೆ ಕಂಡು ಅವರಿಗೆ ಬಹಳ ಸಂತೋಷ ಆಗಿದೆ. ‘ಮೊಗ್ಗಿನ ಮನಸು’, ‘ಕೃಷ್ಣ ಲೀಲಾ’, ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಗಳ ಖ್ಯಾತಿಯ ನಿರ್ದೇಶಕ ಶಶಾಂಕ್ (Director Shashank) ಅವರು ‘ಬ್ರ್ಯಾಟ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಸ್ಟೇಡಿಯಂನಲ್ಲಿ ಆರ್​ಸಿಬಿ ಮ್ಯಾಚ್ ನೋಡಿ ಎಂಜಾಯ್ ಮಾಡಿದ ರೀತಿಯಲ್ಲಿ ಪ್ರೇಕ್ಷಕರು ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಫ್ಯಾಮಿಲಿ ಜೊತೆ ಬಂದು ನಮ್ಮ ಚಿತ್ರವನ್ನು ನೋಡಿ’ ಎಂದು ಡಾರ್ಲಿಂಗ್ ಕೃಷ್ಣ (Darling Krishna) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More