‘ಕೌಸಲ್ಯ ಸುಪ್ರಜಾ ರಾಮ’ ನನ್ನ ಈವರೆಗಿನ ಅತ್ಯುತ್ತಮ ಸಿನಿಮಾ’ ಯಾಕೆಂದು ವಿವರಿಸಿದ ಡಾರ್ಲಿಂಗ್ ಕೃಷ್ಣ

Updated on: Jul 15, 2023 | 8:19 AM

Darling Krishna: 'ಕೌಸಲ್ಯ ಸುಪ್ರಜಾ ರಾಮ' ಸಿನಿಮಾವು ತಮ್ಮ ಈ ವರೆಗಿನ ವೃತ್ತಿ ಜೀವನದ ಅತ್ಯುತ್ತಮ ಸಿನಿಮಾ ಎಂದಿದ್ದಾರೆ ಡಾರ್ಲಿಂಗ್ ಕೃಷ್ಣ.

ಶಶಾಂಕ್ (Shashank) ನಿರ್ದೇಶಿಸಿ ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಟ ಡಾರ್ಲಿಂಗ್ ಕೃಷ್ಣ, ”ಇದು ನನ್ನ ಈವರೆಗಿನ ವೃತ್ತಿ ಜೀವನದಲ್ಲಿಯೇ ಅತ್ಯುತ್ತಮ ಸಿನಿಮಾ. ಇಂಥಹಾ ಅತ್ಯುತ್ತಮ ನರೇಶನ್ ಅನ್ನು ಈವರೆಗೆ ನಾನು ಕೇಳಿರಲೇ ಇಲ್ಲ” ಎಂದರು. ಯಾಕೆ ಈ ಸಿನಿಮಾ ತಮಗೆ ಇಷ್ಟು ವಿಶೇಷ ಎಂಬುದನ್ನೂ ವಿವರಣೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More