AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ

‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ

ರಾಜೇಶ್ ದುಗ್ಗುಮನೆ
|

Updated on: Jul 03, 2024 | 9:30 AM

Share

ಕೊಲೆ ಕೇಸ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಅವರನ್ನು ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ಅವರು ಕೊಲೆ ಮಾಡಿದ್ದು ರೇಣುಕಾಸ್ವಾಮಿಯನ್ನು. ಕೆಲವರು ರೇಣುಕಾಸ್ವಾಮಿಯನ್ನು ವಿಕೃತಕಾಮಿ ಎಂದು ಕರೆದಿದ್ದಾರೆ. ಈಗ ಸಂಗೀತ ಸಂಯೋಜಕ ವಿ ಮನೋಹರ್ ಕೂಡ ಹಾಗೆಯೇ ಕರೆದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ದರ್ಶನ್ ಅವರು ರೇಣುಕಾಸ್ವಾಮಿಯನ್ನು ಕೊಲೆ ಮಾಡಿದರು ಎನ್ನಲಾಗಿದೆ. ದರ್ಶನ್ ಜೊತೆ ಇನ್ನೂ ಹಲವರು ಬಂಧನಕ್ಕೆ ಒಳಗಾಗಿದ್ದಾರೆ. ದರ್ಶನ್ ಸದ್ಯ ಕೇಂದ್ರ ಕಾರಾಗೃಹದಲ್ಲಿದ್ದಾರೆ. ದರ್ಶನ್ ಕೇಸ್ ಬಗ್ಗೆ ಕೆಲವರು ಅಭಿಪ್ರಾಯ ಹಂಚಿಕೊಂಡರೆ ಇನ್ನೂ ಕೆಲವರು ಮೌನವಹಿಸಿದ್ದಾರೆ. ಸಂಗೀತ ಸಂಯೋಜಕ ವಿ. ಮನೋಹರ್ ಅವರು ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದಾರೆ. ‘ರೇಣುಕಾಸ್ವಾಮಿ ಮುಗ್ಧನಲ್ಲ, ಆತ ವಿಕೃತಕಾಮಿ. ದರರ್ಶನ್ ಅವರ ಬಗ್ಗೆ ನಾನು ಯಾವುದೇ ನೆಗೆಟಿವ್ ಹೇಳಿಕೆ ನೀಡಲ್ಲ. ಮುಂದಿನ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಾಮಿಸ್ ಮಾಡಿದ್ದರು. ಇದಾದ ಕೆಲವೇ ದಿನಕ್ಕೆ ಅವರು ಬಂಧನಕ್ಕೆ ಒಳಗಾದರು’ ಎಂದಿದ್ದಾರೆ ಮನೋಹರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More