ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
Darshan-Pavithra Gowda: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನಿತರೆ ಕೆಲವು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ವಿಚಾರಣೆಯ ಲೈವ್ ವಿವರಗಳನ್ನು ಇಲ್ಲಿ ನೊಡಿ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್, ಪವಿತ್ರಾ ಸೇರಿದಂತೆ ಇನ್ನಿತರೆ ಕೆಲವು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರು 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಕಳೆದ ಒಂದು ವಾರದಿಂದಲೂ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, ದರ್ಶನ್ ಪರ ವಕೀಲ ಸಿವಿ ನಾಗೇಶ್, ಪವಿತ್ರಾ ಪರ ವಕೀಲ ಸೆಬಾಸ್ಟಿಯನ್ ಅವರುಗಳು ಆರೋಪ ಪಟ್ಟಿ ಮತ್ತು ಪೊಲೀಸರ ತನಿಖೆ ಬಗ್ಗೆ ಎತ್ತಿದ್ದ ಅನುಮಾನಗಳಿಗೆ, ಪ್ರಶ್ನೆಗಳಿಗೆ ಎಸ್ಪಿಪಿ ಪ್ರಸನ್ನ ಕುಮಾರ್ ಸ್ಪಷ್ಟನೆಗಳನ್ನು ನೀಡುತ್ತಿದ್ದಾರೆ. ಇಂದು ಮಧ್ಯಾಹ್ನ ವಿಚಾರಣೆ ಪ್ರಾರಂಭವಾಗಿದ್ದು, ಸಂಜೆ ವರೆಗೆ ವಿಚಾರಣೆ ನಡೆಯಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 09, 2024 01:55 PM
Latest Videos