ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?

Updated on: Oct 08, 2024 | 3:59 PM

ಜಾಮೀನಿಗಾಗಿ ದರ್ಶನ್​ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸದ್ಯದಲ್ಲೇ ನಡೆಯಲಿದೆ. ಹಲವು ಬಾರಿ ಅವರ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿತ್ತು. ಈಗಲಾದರೂ ಜಾಮೀನು ಸಿಗಬಹುದಾ ಎಂಬ ಕೌತುಕ ಅವರ ಆಪ್ತರಲ್ಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಮತ್ತು ಎ1 ಪವಿತ್ರಾ ಅವರ ಅರ್ಜಿ ವಿಚಾರಣೆ ಕೂಡ ಇಂದು (ಅ.8) ನಡೆಯಲಿದೆ.

ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹಾಗಿದ್ದರೂ ಕೂಡ ಅವರು ಚಿಕಿತ್ಸೆ ಪಡೆದಿಲ್ಲ. ದರ್ಶನ್​ ಮೊಂಡುತನದಿಂದ ಅಧಿಕಾರಿಗಳಿಗೆ ಸಮಸ್ಯೆ ಆಗಿದೆ. ಹಾಗಾಗಿ ದರ್ಶನ್ ಅನಾರೋಗ್ಯ ಮತ್ತು ಚಿಕಿತ್ಸೆ ಬಗ್ಗೆ ಸಮಗ್ರ ವರದಿಯನ್ನು ವಿಮ್ಸ್​ ವೈದ್ಯರಿಂದ ಜೈಲಾಧಿಕಾರಿಗಳು ಕೇಳಿದ್ದಾರೆ. ಜಾಮೀನು ಪಡೆಯಲು ದರ್ಶನ್​ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯುತ್ತಿದೆ. ಒಂದು ವೇಳೆ ಜಾಮೀನು ಸಿಕ್ಕರೆ ಬೆಂಗಳೂರಿಗೆ ಬಂದು ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ದರ್ಶನ್​ ತೀರ್ಮಾನಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More