AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಸ್ವಾಮಿ ಕೇಸ್ ವಿಚಾರಣೆ: ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಬಂದ ದರ್ಶನ್, ಪವಿತ್ರಾ ಗೌಡ

ರೇಣುಕಾಸ್ವಾಮಿ ಕೇಸ್ ವಿಚಾರಣೆ: ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಬಂದ ದರ್ಶನ್, ಪವಿತ್ರಾ ಗೌಡ

ಮದನ್​ ಕುಮಾರ್​
|

Updated on: Nov 03, 2025 | 2:50 PM

Share

ರೇಣುಕಾಸ್ವಾಮಿ ಕೊಲೆ ಕೇಸ್​​ನ ದೋಷಾರೋಪಣೆ ಇಂದು (ನ.3) ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ವಿಚಾರಣೆಯಲ್ಲಿ ಪಾಲ್ಗೊಳ್ಳಲು ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಪವಿತ್ರಾ ಗೌಡ, ದರ್ಶನ್ ಮುಂತಾದ ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ದೋಷಾರೋಪಣೆ ಪ್ರಕ್ರಿಯೆ ಇಂದು (ನವೆಂಬರ್ 3) ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ವಿಚಾರಣೆಯಲ್ಲಿ ಪಾಲ್ಗೊಳ್ಳಲು ಎಲ್ಲ ಆರೋಪಿಗಳು ಕೋರ್ಟ್​​ಗೆ ಹಾಜರಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದ ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಕೋರ್ಟ್​ಗೆ ಕರೆತರಲಾಗಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಹಲಸೂರು ಗೇಟ್ ಠಾಣೆ ಪೊಲೀಸರು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ. ಇಬ್ಬರು ಪಿಐ, ಪಿಎಸ್ಐ, ಕೆಎಸ್ಆರ್​ಪಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ದರ್ಶನ್ (Darshan) ಸೇರಿದಂತೆ ಎಲ್ಲ ಆರೋಪಿಗಳ ಮೇಲೆ ಪೊಲೀಸರು ಹೇರಿರುವ ಆರೋಪಗಳನ್ನು ಓದಿ ಹೇಳಲಾಗುತ್ತದೆ. ಆರೋಪಗಳನ್ನು ಒಪ್ಪಿಕೊಂಡರೆ ಶಿಕ್ಷೆ ಪ್ರಕಟ ಆಗುತ್ತದೆ. ಆರೋಪಗಳನ್ನು ನಿರಾಕರಿಸಿದರೆ ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ. ವಿಚಾರಣೆಗೆ ದಿನಾಂಕ ನಿಗದಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More