ದುಬೈಗೆ ತೆರಳಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ದರ್ಶನ್-ವಿಜಯಲಕ್ಷ್ಮಿ
ನಟ ದರ್ಶನ್ ಅವರು ಸಿನಿಮಾ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ದುಬೈಗೆ ತೆರಳಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜತೆ ಅವರು ವಿವಾಹ ವಾರ್ಷಿಕೋತ್ಸವ ಸೆಲೆಬ್ರೇಟ್ ಮಾಡಿದ್ದಾರೆ. ದರ್ಶನ್ ಮತ್ತು ವಿಜಯಲಕ್ಷ್ಮಿ ದಂಪತಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ಆಪ್ತರು ಶುಭಾಶಯ ತಿಳಿಸಿದ್ದಾರೆ. ಫೋಟೋಗಳು ವೈರಲ್ ಆಗಿವೆ.
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ (Darshan) ಅವರು ‘ಡೆವಿಲ್: ದಿ ಹೀರೋ’ ಸಿನಿಮಾದ ಕೆಲಸಗಳ ನಡುವೆ ಬಿಡುವು ಪಡೆದ ದುಬೈಗೆ ತೆರಳಿದ್ದಾರೆ. ಅಲ್ಲಿ ಅವರು ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಜೊತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಆಪ್ತರು ವೆಡ್ಡಿಂಗ್ ಆ್ಯನಿವರ್ಸರಿಯ ಶುಭಾಶಯ ಕೋರಿದ್ದಾರೆ. ಇನ್ನೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾ ಗೌಡ ಅವರು ಕೋಪ ಹೊರಹಾಕಿದ್ರಾ ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ದರ್ಶನ್ ಅವರು ಈ ಹಿಂದೆ ಸಂದರ್ಶನವೊಂದರಲ್ಲಿ ಕರ್ಮದ ಬಗ್ಗೆ ಮಾತಾಡಿರೋ ವೈರಲ್ ವಿಡಿಯೋವನ್ನು ಈಗ ಪವಿತ್ರಾ ಗೌಡ (Pavithra Gowda) ಶೇರ್ ಮಾಡಿ ‘ಕರ್ಮ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಈ ವಿಡಿಯೋ ಮತ್ತು ಕ್ಯಾಪ್ಷನ್ನ ಸೀಕ್ರೆಟ್ ಏನು ಎಂಬ ಕುತೂಹಲ ಹುಟ್ಟುಕೊಂಡಿದೆ. ಕೆಲವು ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾ ಹಾಗೂ ವಿಜಯಲಕ್ಷ್ಮಿ ನಡುವೆ ವಾರ್ ಆಗಿತ್ತು. ಆ ಮುನಿಸು ಇನ್ನೂ ಕಡಿಮೆ ಆದಂತಿಲ್ಲ. ಇಂದು (ಮೇ 20) ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ಲ್ಲಿ ಸ್ಟೋರಿ ಶೇರ್ ಮಾಡಿದ 1 ಗಂಟೆ ನಂತರ ಪವಿತ್ರಾ ಅವರು ಕರ್ಮದ ವಿಡಿಯೋ ಶೇರ್ ಮಾಡಿದ್ದಾರೆ. ಇದರಿಂದ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
