‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ

Updated on: Apr 09, 2025 | 8:51 PM

ಏಪ್ರಿಲ್ 10ರಂದು ‘ವಾಮನ’ ಸಿನಿಮಾ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ನಡೆದ ಪ್ರೀಮಿಯರ್ ಶೋನಲ್ಲಿ ದರ್ಶನ್ ಅವರು ಭಾಗಿಯಾಗಿದ್ದಾರೆ. ಸಿನಿಮಾ ನೋಡಲು ಬಂದ ಅವರು ಚಿಕ್ಕಣ್ಣ ಜೊತೆ ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಕೆಲವೇ ದಿನಗಳ ಹಿಂದೆ ‘ವಾಮನ’ ಟ್ರೇಲರ್​ ಅನ್ನು ದರ್ಶನ್ ರಿಲೀಸ್ ಮಾಡಿದ್ದರು.

ನಟ ಧನ್ವೀರ್ ಗೌಡ (Dhanveer Gowda) ಅವರು ‘ವಾಮನ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಪ್ರೀಮಿಯರ್ ಶೋಗೆ ದರ್ಶನ್ ಅವರು ಆಗಮಿಸಿದ್ದಾರೆ. ಬೆಂಗಳೂರಿನ ಖಾಸಗಿ ಮಾಲ್​ನಲ್ಲಿ ಸಿನಿಮಾ ಪ್ರದರ್ಶನ ಏರ್ಪಡಿಸಿದ್ದು, ಅಲ್ಲಿ ಚಿಕ್ಕಣ್ಣ, ಧನ್ವೀರ್ ಗೌಡ ಮುಂತಾದವರ ಜೊತೆ ದರ್ಶನ್ (Darshan) ಅವರು ಕುಶಲೋಪರಿ ವಿಚಾರಿಸಿದ್ದಾರೆ. ದರ್ಶನ್ ಜೈಲಿನಲ್ಲಿ ಇದ್ದಾಗ ಧನ್ವೀರ್ ಅವರು ಸಹಾಯ ಮಾಡಿದ್​ದರು. ಈಗ ಧನ್ವೀರ್ ಅವರ ಸಿನಿಮಾಗೆ ದರ್ಶನ್ ಬೆಂಬಲ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ‘ವಾಮನ’ (Vaamana) ಟ್ರೇಲರ್​ ಬಿಡುಗಡೆ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More