ಕೊಲೆ ಕೇಸ್ನಲ್ಲಿ ಕೋರ್ಟ್ಗೆ ಹಾಜರಾದ ದರ್ಶನ್; ವಿಚಾರಣೆ ಸೆಪ್ಟೆಂಬರ್ಗೆ ಮುಂದೂಡಿಕೆ
ದರ್ಶನ್ ಮತ್ತು ಇನ್ನೂ 16 ಮಂದಿ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿದ್ದರು. ಈ ಪ್ರಕರಣ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈಗ ಈ ಪ್ರಕರಣದಲ್ಲಿ ದರ್ಶನ್ ಅವರು ಕೋರ್ಟ್ಗೆ ಹಾಜರಿ ಹಾಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿ ಇದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ (Darshan) ಹಾಗೂ ಅವರ ಗ್ಯಾಂಗ್ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ಗೆ ಹಾಜರಿ ಹಾಕಿದೆ. ಕೋರ್ಟ್ಗೆ ದರ್ಶನ್, ಪವಿತ್ರಾ ಹಾಗೂ ಇತರರು ಆಗಮಿಸಿದ್ದಾರೆ. ಇಂದಿನ ವಿಚಾರಣೆ ತುಂಬಾನೇ ಮಹತ್ವದ್ದಾಗಲಿದೆ. ಎಲ್ಲಾ ಆರೋಪಿಗಳು ಹಾಜಾರಾದರೆ ಇಂದೇ ಚಾರ್ಜಸ್ ಫ್ರೇಮ್ ಮಾಡುವ ಸಾದ್ಯತೆ ಇತ್ತು. ಆದರೆ, ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್ಗೆ ಹಾಜಾರಾಗಿಲ್ಲ ಹೀಗಾಗಿ, ಸೆಪ್ಟೆಂಬರ್9 ಕ್ಕೆ ಮುಂದಿನ ದಿನಾಂಕ ವಿಚಾರಣೆಯನ್ನು ನಿಗದಿ ಪಡಿಸಲಾಗಿದೆ. ಆ ದಿನ ಪ್ರಕರಣದ ಎಲ್ಲಾ ಆರೋಪಿಗಳು ಹಾಜರು ಇರಬೇಕು ಎಂದು ನಿರ್ದೇಶಿಸಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

