ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ

Edited By:

Updated on: Jul 17, 2025 | 9:52 PM

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದೆ. ಅದರ ವಿಚಾರಣೆ ಜುಲೈ 22ಕ್ಕೆ ಮುಂದೂಡಲಾಗಿದೆ. ಇಂದು (ಜುಲೈ 17) ನಡೆದ ವಿಚಾರಣೆ ಬಗ್ಗೆ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ಅವರು ಮಾಹಿತಿ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಅವರಿಗೆ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದೆ. ಅದರ ವಿಚಾರಣೆ ಜುಲೈ 22ಕ್ಕೆ ಮುಂದೂಡಲಾಗಿದೆ. ಇಂದು (ಜುಲೈ 17) ನಡೆದ ವಿಚಾರಣೆ ಬಗ್ಗೆ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ಅವರು ಮಾಹಿತಿ ನೀಡಿದ್ದಾರೆ. ಸದ್ಯ ದರ್ಶನ್ ಅವರು ‘ದಿ ಡೆವಿಲ್’ ಸಿನಿಮಾದ ಶೂಟಿಂಗ್ ಸಲುವಾಗಿ ವಿದೇಶಕ್ಕೆ ತೆರಳಿದ್ದಾರೆ. ಒಂದು ವೇಳೆ ಜಾಮೀನು (Bail) ರದ್ದಾದರೆ ಅವರಿಗೆ ಸಂಕಷ್ಟ ಎದುರಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.