ದರ್ಶನ್​ಗೆ ಆರತಿ ಬೆಳಗಿದ ಹೆಣ್ಮಕ್ಕಳು; ಹುಟ್ಟುಹಬ್ಬದ ದಿನ ಅಭಿಮಾನದ ಹೊಳೆ

ದರ್ಶನ್​ ಅವರು ಇಂದು (ಫೆ.16) ಅಭಿಮಾನಿಗಳ ಜೊತೆ ಸಮಯ ಕಳೆಯುತ್ತಿದ್ದಾರೆ. ಬೆಂಗಳೂರಿನ ಅವರ ಮನೆ ಎದುರು ಜನಸಾಗರ ಸೇರಿದೆ. ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ ಕಂಡು ಅಭಿಮಾನಿಗಳು ಖುಷಿಪಡುತ್ತಿದ್ದಾರೆ. ಮಹಿಳಾ ಅಭಿಮಾನಿಗಳು ಆರತಿ ಬೆಳಗುವ ಮೂಲಕ ಶುಭ ಹಾರೈಸುತ್ತಿದ್ದಾರೆ. ಬಹಳ ಸಂಭ್ರಮದಿಂದ ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಹುಟ್ಟುಹಬ್ಬ ಆಚರಿಸಲಾಗುತ್ತಿದೆ.

ದರ್ಶನ್​ಗೆ ಆರತಿ ಬೆಳಗಿದ ಹೆಣ್ಮಕ್ಕಳು; ಹುಟ್ಟುಹಬ್ಬದ ದಿನ ಅಭಿಮಾನದ ಹೊಳೆ
|

Updated on: Feb 16, 2024 | 11:47 AM

ನಟ ದರ್ಶನ್​ ಅವರ ಹುಟ್ಟುಹಬ್ಬದ (Darshan Birthday) ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು ಅವರ ನಿವಾಸದ ಬಳಿ ಜಮಾಯಿಸಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ಅಭಿಮಾನಿಗಳು ಅವರನ್ನು ಭೇಟಿ ಮಾಡಿ ಶುಭ ಹಾರೈಸುತ್ತಿದ್ದಾರೆ. ಜನ್ಮದಿನದ ಪ್ರಯುಕ್ತ ಮಹಿಳಾಭಿಮಾನಿಗಳು (Darshan Fans) ದರ್ಶನ್​ಗೆ ಆರತಿ ಬೆಳಗಿದ್ದಾರೆ. ತಿಲಕ ಇಟ್ಟು ಶುಭ ಕೋರಿದ್ದಾರೆ. ಇನ್ನೂ ಕೆಲವರು ದೃಷ್ಟಿ ತೆಗೆಯುವ ಮೂಲಕ ಅಭಿಮಾನ ಪ್ರದರ್ಶಿಸಿದ್ದಾರೆ. ದರ್ಶನ್​ (Darshan) ಅವರ 47ನೇ ವರ್ಷದ ಹುಟ್ಟುಹಬ್ಬವನ್ನು ಎಲ್ಲ ಕಡೆಗಳಲ್ಲಿ ಆಚರಿಸಲಾಗುತ್ತಿದೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ತೆರೆಕಂಡ ‘ಕಾಟೇರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಹಾಗಾಗಿ ಈ ಬಾರಿ ‘ಚಾಲೆಂಜಿಂಗ್​ ಸ್ಟಾರ್​’ ಬರ್ತ್​ಡೇ ಬಹಳ ವಿಶೇಷವಾಗಿದೆ. ಅವರ ಮುಂದಿನ ಸಿನಿಮಾಗಳ ಮೇಲೆ ನಿರೀಕ್ಷೆ ಮನೆ ಮಾಡಿದೆ. ದರ್ಶನ್​ ಬರ್ತ್​ಡೇ ಪ್ರಯುಕ್ತ ‘ಡೆವಿಲ್​’ ಸಿನಿಮಾದ ಫಸ್ಟ್​ಲುಕ್ ಟೀಸರ್​ ಬಿಡುಗಡೆ ಆಗಿದೆ. ಈ ಸಿನಿಮಾಗೆ ಪ್ರಕಾಶ್​ ವೀರ್​ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್​ ನಟನೆಯ 59ನೇ ಚಿತ್ರಕ್ಕೆ ತರುಣ್​ ಸುಧೀರ್​ ನಿರ್ದೇಶನ ಮಾಡಲಿದ್ದಾರೆ. ಆ ಸಿನಿಮಾದ ಪೋಸ್ಟರ್​ ಕೂಡ ಇದು ಬಿಡುಗಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​