ರೇಣುಕಾ ಸ್ವಾಮಿ ಕೊಲೆಯಾದ ಶೆಡ್ಗೆ ಬಂದಿತ್ತು ದರ್ಶನ್ ಕಾರು; ಸಿಸಿಟಿವಿ ದೃಶ್ಯ ಲಭ್ಯ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಬಂಧನವಾಗಿದ್ದು ಪೊಲೀಸರು ಹಲವು ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಶೆಡ್ಗೆ ಕರೆದುಕೊಂಡು ಹೋಗಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿತ್ತು. ಅಂದು ರಾತ್ರಿ ಅದೇ ಶೆಡ್ಗೆ ದರ್ಶನ್ ಕಾರು ಸಹ ಬಂದಿತ್ತು ಎಂಬುದಕ್ಕೆ ಈಗ ಸಾಕ್ಷಿ ಸಿಕ್ಕಿದೆ. ಸಿಸಿಟಿವಿ ದೃಶ್ಯಗಳು ಲಭ್ಯವಾಗಿವೆ.
ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಈಗ ದೊಡ್ಡ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಆಗಿದ್ದು ಪೊಲೀಸರು ವಿವಿಧ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ. ರೇಣುಕಾ ಸ್ವಾಮಿಯನ್ನು ಶೆಡ್ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಲಾಗಿತ್ತು. ಅದೇ ಶೆಡ್ಗೆ ಅಂದು ರಾತ್ರಿ ದರ್ಶನ್ ಅವರ ಕಾರು ಕೂಡ ಬಂದಿತ್ತು. ಅದಕ್ಕೆ ಸಾಕ್ಷಿ ಎಂಬಂತೆ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಜೊತೆ ಪವಿತ್ರಾ ಗೌಡ (Pavithra Gowda) ಸೇರಿದ ಒಟ್ಟು 13 ಜನರ ಬಂಧನ ಆಗಿದೆ. ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ಕೋರ್ಟ್ಗೆ ಹಾಜರುಪಡಿಸಲಾಗುವುದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

