ರೇಣುಕಾ ಸ್ವಾಮಿ ಕೊಲೆಯಾದ ಶೆಡ್​ಗೆ ಬಂದಿತ್ತು ದರ್ಶನ್​ ಕಾರು; ಸಿಸಿಟಿವಿ ದೃಶ್ಯ ಲಭ್ಯ

Updated on: Jun 11, 2024 | 5:41 PM

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್​ವುಡ್​ ನಟ ದರ್ಶನ್​ ಬಂಧನವಾಗಿದ್ದು ಪೊಲೀಸರು ಹಲವು ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಶೆಡ್​ಗೆ ಕರೆದುಕೊಂಡು ಹೋಗಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿತ್ತು. ಅಂದು ರಾತ್ರಿ ಅದೇ ಶೆಡ್​ಗೆ ದರ್ಶನ್​ ಕಾರು ಸಹ ಬಂದಿತ್ತು ಎಂಬುದಕ್ಕೆ ಈಗ ಸಾಕ್ಷಿ ಸಿಕ್ಕಿದೆ. ಸಿಸಿಟಿವಿ ದೃಶ್ಯಗಳು ಲಭ್ಯವಾಗಿವೆ.

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್​ (Darshan) ಈಗ ದೊಡ್ಡ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್​ ಅರೆಸ್ಟ್​ ಆಗಿದ್ದು ಪೊಲೀಸರು ವಿವಿಧ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ. ರೇಣುಕಾ ಸ್ವಾಮಿಯನ್ನು ಶೆಡ್​ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಲಾಗಿತ್ತು. ಅದೇ ಶೆಡ್​ಗೆ ಅಂದು ರಾತ್ರಿ ದರ್ಶನ್​ ಅವರ ಕಾರು ಕೂಡ ಬಂದಿತ್ತು. ಅದಕ್ಕೆ ಸಾಕ್ಷಿ ಎಂಬಂತೆ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಈ ಪ್ರಕರಣದಲ್ಲಿ ದರ್ಶನ್​ ಜೊತೆ ಪವಿತ್ರಾ ಗೌಡ (Pavithra Gowda) ಸೇರಿದ ಒಟ್ಟು 13 ಜನರ ಬಂಧನ ಆಗಿದೆ. ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ಕೋರ್ಟ್​ಗೆ ಹಾಜರುಪಡಿಸಲಾಗುವುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More