ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೋರ್ಟ್ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲು ಆಗಿರುವ ನಟ ದರ್ಶನ್ ಅವರಿಗೆ ಸಾಕಷ್ಟು ಆತಂಕ ಇದೆ. ಒಂದು ವರ್ಷದ ಒಳಗೆ ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೆ 2 ಬಾರಿ ವಿಚಾರಣೆ ನಡೆಸಲು ಸ್ಥಳೀಯ ಕೋರ್ಟ್ ಮುಂದಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲು ಆಗಿರುವ ನಟ ದರ್ಶನ್ (Darshan) ಅವರಿಗೆ ಸಾಕಷ್ಟು ಆತಂಕ ಇದೆ. ಒಂದು ವರ್ಷದ ಒಳಗೆ ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೆ 2 ಬಾರಿ ವಿಚಾರಣೆ ನಡೆಸಲು ಸ್ಥಳೀಯ ಕೋರ್ಟ್ ಮುಂದಾಗಿದೆ. ದರ್ಶನ್ ಅವರು ಜೈಲು ಸೇರಿ ಹಲವು ತಿಂಗಳು ಕಳೆದಿದೆ. ಇನ್ನೊಂದು ವರ್ಷ ಜಾಮೀನು (Bail) ಸಿಗಲ್ಲ ಎಂಬ ವಿಚಾರದಿಂದ ಅವರಿಗೆ ಚಿಂತೆ ಶುರುವಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಜಾಗೊಂಡಿದ್ದರಿಂದ ಅವರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಒಂದು ವರ್ಷದ ಒಳಗೆ ವಿಚಾರಣೆ ಮುಗಿಸಬೇಕು ಎಂಬ ಸುಪ್ರೀಂ ಕೋರ್ಟ್ (Supreme Court) ಆದೇಶದ ಪ್ರತಿಯನ್ನು ವಕೀಲರು ಸೆಷನ್ಸ್ ಕೋರ್ಟ್ಗೆ ಸಲ್ಲಿಸಿದ್ದಾರೆ. ಪ್ರತಿ ದಿನ ಅಥವಾ ವಾರದಲ್ಲಿ 4 ದಿನ ವಿಚಾರಣೆ ನಡೆಸುವ ನಿರ್ಧಾರ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: May 24, 2026 02:07 PM
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್
ಕಾಂಗ್ರೆಸ್ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್

