ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್

Updated on: Feb 21, 2026 | 4:15 PM

ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ಜೈಲಿನಲ್ಲಿ ಇದ್ದರೂ ಅಭಿಮಾನಿಗಳು ಸಂತೋಷದಿಂದ ಅವರ ಹುಟ್ಟು ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ಮಧ್ಯೆ ದರ್ಶನ್ ಅವರು ಬರ್ತ್​​ಡೇನ ಅರ್ಥ ಪೂರ್ಣವಾಗಿ ಆಚರಿಸಿದವರಿಗೆ ಧನ್ಯವಾದ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ನಟ ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಪತ್ನಿ ವಿಜಯಲಕ್ಷ್ಮೀ, ಸಹೋದರನಂತೆ ಇರುವ ನಟ ಧನ್ವೀರ್ ಅವರು ಹೊರಗಿನ ಅಪ್​​ಡೇಟ್​​ನ ದರ್ಶನ್​ಗೆ ನೀಡುತ್ತಿದ್ದಾರೆ. ದರ್ಶನ್ ಜನ್ಮದಿನ (ಫೆಬ್ರವರಿ 16) ಪ್ರಯುಕ್ತ ಒಳ್ಳೊಳ್ಳೆಯ ಕೆಲಸಗಳನ್ನು ಅಭಿಮಾನಿಗಳು ಮಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಕೊಲ್ಯಾಜ್ ಮಾಡಿ ದರ್ಶನ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ. ‘ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ನನ್ನೆಲ್ಲಾ ಸೆಲೆಬ್ರಿಟಿಗಳಿಗೆ ಧನ್ಯವಾದ’ ಎಂದು ದರ್ಶನ್ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More