‘ದರ್ಶನ್ಗೆ ಸರ್ಜರಿ ಇಷ್ಟ ಇಲ್ಲ’: ಕಾರಣ ತಿಳಿಸಿದ ಸುಮಲತಾ ಅಂಬರೀಷ್
ಬೆನ್ನು ನೋವಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ದರ್ಶನ್ ಅವರಿಗೆ ಜಾಮೀನು ನೀಡಲಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಬಗ್ಗೆ ಸುಮಲತಾ ಅಂಬರೀಷ್ ಅವರು ಮಾತನಾಡಿದ್ದಾರೆ. ದರ್ಶನ್ ಅವರ ಆರೋಗ್ಯದ ಬಗ್ಗೆ ಸುಮಲತಾ ಅಪ್ಡೇಟ್ ನೀಡಿದ್ದಾರೆ. ದರ್ಶನ್ಗೆ ಸರ್ಜರಿ ಇಷ್ಟ ಇಲ್ಲ ಎಂಬ ವಿಷಯವನ್ನು ಅವರು ಬಹಿರಂಗಪಡಿಸಿದ್ದಾರೆ.
ಸುಮಲತಾ ಅಂಬರೀಷ್ ಹಾಗೂ ದರ್ಶನ್ ಅವರ ನಡುವೆ ಉತ್ತಮ ಒಡನಾಟ ಇದೆ. ಈಗ ಬೆನ್ನು ನೋವಿಗೆ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಕುರಿತು ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ‘ಬೆನ್ನು ನೋವು ತುಂಬಾ ಇದೆ. ಆದರೆ ಸರ್ಜರಿ ಅವರಿಗೆ ಇಷ್ಟ ಇಲ್ಲ ಅಂತ ನಾನು ಕೇಳ್ಪಟ್ಟೆ. ಯಾಕೆಂದರೆ, ಸರ್ಜರಿ ಮಾಡಿದರೆ ರಿಕವರಿ ಸಮಯ ತುಂಬ ಇರುತ್ತೆ. ಶೂಟಿಂಗ್ ಅರ್ಧಕ್ಕೆ ನಿಂತಿದೆ. ಇದು ಸಿನಿಮಾ ಇಂಡಸ್ಟ್ರಿ ನಷ್ಟ ಎದುರಿಸುತ್ತಿರುವ ಸಂದರ್ಭ. ಹೆಚ್ಚಿನ ಮಾಹಿತಿ ಇಲ್ಲ. ದರ್ಶನ್ ಕೈಯಲ್ಲಿ ಫೋನ್ ಇಲ್ಲ. ಅವರ ಪತ್ನಿ ಜೊತೆ ನಾವು ಸಂಪರ್ಕ ಮಾಡಬೇಕು ಅಷ್ಟೇ’ ಎಂದು ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
