ಧ್ರುವ ಸರ್ಜಾ, ದರ್ಶನ್ ನಡುವಿನ ಮುನಿಸಿಗೆ ಕಾರಣ ಏನು? ಮಾಜಿ ಮ್ಯಾನೇಜರ್​ಗೆ ಪ್ರಶ್ನೆ

Updated on: Apr 16, 2026 | 11:02 PM

ಇಷ್ಟು ವರ್ಷಗಳ ಕಾಲ ಕಣ್ಮರೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಈಗ ಮಾಧ್ಯಮಗಳ ಎದುರು ಬಂದಿದ್ದಾರೆ. ಈ ವೇಳೆ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ಶೀಘ್ರದಲ್ಲೇ ಅರ್ಜುನ್ ಸರ್ಜಾ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ವಿಡಿಯೋ ಇಲ್ಲಿದೆ.

ಇಷ್ಟು ವರ್ಷಗಳ ಕಾಲ ಕಣ್ಮರೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ (Darshan Manager Mallikarjun) ಈಗ ಮಾಧ್ಯಮಗಳ ಎದುರು ಬಂದಿದ್ದಾರೆ. ಈ ವೇಳೆ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ಕೆಲವು ವರ್ಷಗಳ ಹಿಂದೆ ದರ್ಶನ್ ಮತ್ತು ಧ್ರುವ ಸರ್ಜಾ (Dhruva Sarja) ಅವರ ನಡುವೆ ಬಾಂಧವ್ಯ ಇತ್ತು. ಆದರೆ ಅದು ಮುಂದುವರಿಯಲಿಲ್ಲ. ಅದಕ್ಕೆ ಕಾರಣ ಏನಿರಬಹುದು ಎಂದು ಮಲ್ಲಿಕಾರ್ಜುನ್ ಅವರಿಗೆ ಪ್ರಶ್ನೆ ಎದುರಾಗಿದೆ. ‘ಪ್ರೇಮ ಬರಹ’ ಸಿನಿಮಾ ವೇಳೆ ಧ್ರುವ ಸರ್ಜಾ ಮತ್ತು ದರ್ಶನ್ (Darshan) ಅವರು ಆಪ್ತವಾಗಿದ್ದರು. ಆ ಮೇಲೆ ಏನಾಯಿತು ಎಂಬುದು ತಮಗೆ ಗೊತ್ತಿಲ್ಲ ಎಂದು ಮಲ್ಲಿಕಾರ್ಜುನ್ ಹೇಳಿದ್ದಾರೆ. ಶೀಘ್ರದಲ್ಲೇ ಅವರು ಅರ್ಜುನ್ ಸರ್ಜಾ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More