ಸಾಕ್ಷಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ ದರ್ಶನ್ ಅಭಿಮಾನಿಗಳು; ಈ ಮೂವರ ಹಿನ್ನೆಲೆ ಏನು?
ಮುಖ್ಯಾಂಶಗಳು
- ಮೂವರು ಅಭಿಮಾನಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
- ಬಂಧಿತರನ್ನು ವೇಣು, ಸುಹಾಸ್ ಮತ್ತು ಪುನೀತ್ ಎಂದು ಗುರುತಿಸಲಾಗಿದೆ.
- ಕೊಲೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಕ್ಕೆ ಮೂವರಿಗೂ ಈ ಸ್ಥಿತಿ ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಮೂವರು ಅಭಿಮಾನಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ವೇಣು, ಸುಹಾಸ್ ಮತ್ತು ಪುನೀತ್ ಎಂದು ಗುರುತಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಅಭಿಮಾನಿಗಳ ಈ ಅತಿರೇಕದ ವರ್ತನೆಯಿಂದ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಾಗಲಿದೆ.
ಅಭಿಮಾನಿಗಳ ಅಭಿಮಾನವೇ ನಟ ದರ್ಶನ್ ಅವರಿಗೆ ಸಂಕಷ್ಟ ತಂದೊಡ್ಡಿದೆ. ಮೂವರು ದರ್ಶನ್ ಅಭಿಮಾನಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಸದ್ಯ ಅವರು ಜೈಲಿನಲ್ಲಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಮೂವರು ಅಭಿಮಾನಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ವೇಣು, ಸುಹಾಸ್ ಮತ್ತು ಪುನೀತ್ ಎಂದು ಗುರುತಿಸಲಾಗಿದೆ. ಅಭಿಮಾನದ ಅತಿರೇಕದಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಕ್ಕೆ ಈ ಮೂವರಿಗೂ ಇಂಥ ಸ್ಥಿತಿ ಬಂದಿದೆ. ಅಭಿಮಾನಿಗಳ ಇಂಥ ವರ್ತನೆಯಿಂದ ದರ್ಶನ್ (Darshan) ಅವರಿಗೆ ಸಂಕಷ್ಟ ಆಗಿದೆ. ದರ್ಶನ್ ಅವರನ್ನು ಹೊರಗೆ ತರಲು ಪತ್ನಿ ವಿಜಯಲಕ್ಷ್ಮಿ ಅವರು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇಂಥ ಸಮಯದಲ್ಲಿ ದರ್ಶನ್ ಅಭಿಮಾನಿಗಳು ಮಿತಿಮೀರಿ ನಡೆದುಕೊಳ್ಳುತ್ತಿರುವುದರಿಂದ ಅವರಿಗೆ ತೊಂದರೆ ಆಗುವ ಸಾಧ್ಯತೆಯೇ ಹೆಚ್ಚಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

