ಕೋರ್ಟ್ ಆವರಣದಲ್ಲೂ ದರ್ಶನ್ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ರೇಣುಕಾ ಸ್ವಾಮಿ ಮರ್ಡರ್ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್ ಅವರನ್ನು ಇಂದು (ಜೂ.20) ಕೋರ್ಟ್ಗೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ದರ್ಶನ್ಗೆ ಮತ್ತೆ 2 ದಿನ ಪೊಲೀಸ್ ಕಸ್ಟಡಿ ಮುಂದುವರಿಸಲು ಆದೇಶಿಸಿದ್ದಾರೆ. ಕೋರ್ಟ್ನಿಂದ ಹೊರಬರುವಾಗ ಅಪ್ಪಟ ಅಭಿಮಾನಿಗಳು ದರ್ಶನ್ಗೆ ಜೈಕಾರ ಹಾಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..
ನಟ ದರ್ಶನ್ಗೆ ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿ ಮುಂದುವರಿಸಲಾಗಿದೆ. ರೇಣುಕಾ ಸ್ವಾಮಿ ಕೊಲೆ (Renuka Swamy Murder) ಕೇಸ್ನಲ್ಲಿ ಎ2 ಆರೋಪಿ ಆಗಿರುವ ಅವರನ್ನು ಇಂದು (ಜೂನ್ 20) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ಮುಗಿಸಿ ಹೊರಬರುವಾಗ ದರ್ಶನ್ರನ್ನು ನೋಡಿ ಅಪ್ಪಟ ಅಭಿಮಾನಿಗಳು (Darshan Fans) ಜೈಕಾರ ಹಾಕಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪ ದರ್ಶನ್ (Darshan) ಹಾಗೂ ಸಹಚರರ ಮೇಲಿದೆ. ತಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಚಿತ್ರರಂಗದ ಅನೇಕರು ಆಗ್ರಹಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

