ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..

Updated on: Jun 20, 2024 | 7:03 PM

ರೇಣುಕಾ ಸ್ವಾಮಿ ಮರ್ಡರ್​ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್​ ಅವರನ್ನು ಇಂದು (ಜೂ.20) ಕೋರ್ಟ್​ಗೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ದರ್ಶನ್​ಗೆ ಮತ್ತೆ 2 ದಿನ ಪೊಲೀಸ್​ ಕಸ್ಟಡಿ ಮುಂದುವರಿಸಲು ಆದೇಶಿಸಿದ್ದಾರೆ. ಕೋರ್ಟ್​ನಿಂದ ಹೊರಬರುವಾಗ ಅಪ್ಪಟ ಅಭಿಮಾನಿಗಳು ದರ್ಶನ್​ಗೆ ಜೈಕಾರ ಹಾಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ನಟ ದರ್ಶನ್​ಗೆ ಮತ್ತೆ ಎರಡು ದಿನಗಳ ಕಾಲ ಪೊಲೀಸ್​ ಕಸ್ಟಡಿ ಮುಂದುವರಿಸಲಾಗಿದೆ. ರೇಣುಕಾ ಸ್ವಾಮಿ ಕೊಲೆ (Renuka Swamy Murder) ಕೇಸ್​ನಲ್ಲಿ ಎ2 ಆರೋಪಿ ಆಗಿರುವ ಅವರನ್ನು ಇಂದು (ಜೂನ್​ 20) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ಮುಗಿಸಿ ಹೊರಬರುವಾಗ ದರ್ಶನ್​ರನ್ನು ನೋಡಿ ಅಪ್ಪಟ ಅಭಿಮಾನಿಗಳು (Darshan Fans) ಜೈಕಾರ ಹಾಕಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪ ದರ್ಶನ್​ (Darshan) ಹಾಗೂ ಸಹಚರರ ಮೇಲಿದೆ. ತಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಚಿತ್ರರಂಗದ ಅನೇಕರು ಆಗ್ರಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More