ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಡಿ ಬಾಸ್ ಜೈಕಾರ

Updated on: Sep 07, 2025 | 9:10 AM

ನಟ ದರ್ಶನ್ ಅವರಿಗೆ ಇರುವ ಅಭಿಮಾನಿಗಳ ಸಂಖ್ಯೆ ಅಪಾರ. ಸದ್ಯಕ್ಕೆ ಕೊಲೆ ಆರೋಪಿಯಾಗಿ ದರ್ಶನ್ ಜೈಲು ಪಾಲಾಗಿದ್ದಾರೆ. ಯಾವುದೇ ಸಂದರ್ಭದಲ್ಲೂ ಅಭಿಮಾನಿಗಳು ದರ್ಶನ್ ಅವರನ್ನು ಮೆರೆಸುತ್ತಾರೆ. ಈಗ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ದರ್ಶನ್​ ಅವರಿಗೆ ಜೈಕಾರ ಕೂಗಲಾಗಿದೆ. ದರ್ಶನ್ ಫೋಟೋ ಹಿಡಿದ ಅಭಿಮಾನಿಗಳು ‘ಬಾಸ್ ಬಾಸ್ ಡಿ ಬಾಸ್’ ಎಂದು ಕೂಗುತ್ತಾ ಸಾಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ನಟ ದರ್ಶನ್ (Darshan) ಅವರಿಗೆ ಇರುವ ಅಭಿಮಾನಿಗಳ ಸಂಖ್ಯೆ ಅಪಾರ. ಸದ್ಯಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ದರ್ಶನ್ ಜೈಲು ಪಾಲಾಗಿದ್ದಾರೆ. ಆದರೆ ಅಭಿಮಾನಿಗಳು ಯಾವುದೇ ಸಂದರ್ಭದಲ್ಲೂ ದರ್ಶನ್ ಮೇಲೆ ಅಭಿಮಾನ ತೋರಿಸುತ್ತಾರೆ. ಈಗ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ (Shivamogga Hindu Mahasabha Ganapathi) ವಿಸರ್ಜನೆ ವೇಳೆ ದರ್ಶನ್​ ಅವರಿಗೆ ಜೈಕಾರ ಕೂಗಲಾಗಿದೆ. ದರ್ಶನ್ ಫೋಟೋ ಹಿಡಿದ ಅಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿದ್ದಾರೆ. ‘ಬಾಸ್ ಬಾಸ್ ಡಿ ಬಾಸ್’ ಎಂದು ಕೂಗುತ್ತಾ ಮೆರೆವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More