‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್

Updated on: Dec 11, 2025 | 9:57 PM

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರಕ್ಕೆ ದರ್ಶನ್ ಅಭಿಮಾನಿಗಳಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಬಹಳ ದಿನಗಳಿಂದ ಕಾದಿದ್ದರು. ಚಿತ್ರದ ಬಿಡುಗಡೆಗೂ ಮುನ್ನವೇ ಅನೇಕ ದಿನಗಳಿಂದ ತಯಾರಿ ನಡೆಸಿದ್ದರು. ಈಗ ರಾಜ್ಯಾದ್ಯಂತ ದರ್ಶನ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ದರ್ಶನ್ ಅಭಿನಯದ ‘ದಿ ಡೆವಿಲ್’ (The Devil) ಸಿನಿಮಾಗೆ ದರ್ಶನ್ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಬಹಳ ದಿನಗಳಿಂದ ಕಾದಿದ್ದರು. ಸಿನಿಮಾ ಬಿಡುಗಡೆಗೂ ಮುನ್ನವೇ ಹಲವು ದಿನಗಳಿಂದ ತಯಾರಿ ನಡೆಸಿದ್ದರು. ಈಗ ರಾಜ್ಯಾದ್ಯಂತ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ತುಮಕೂರಿನ ಅಭಿಮಾನಿಗಳು ಮೊದಲ ದಿನವೇ ಸಿನಿಮಾ ನೋಡಿ ಖುಷಿ ಪಟ್ಟಿದ್ದಾರೆ. ‘ಇದು ನಮಗೆ ಹಬ್ಬ. ನಾವು ಮನೆಗೆ ಹೋಗಿ 15 ದಿನ ಆಯ್ತು. ಕಳೆದ 15 ದಿನದಿಂದ ಚಿತ್ರಮಂದಿರದಲ್ಲೇ ಇದ್ದೇವೆ’ ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ. ಪ್ರಕಾಶ್ ವೀರ್ ಅವರು ನಿರ್ದೇಶನದ ‘ದಿ ಡೆವಿಲ್’ ಸಿನಿಮಾದಲ್ಲಿ ದರ್ಶನ್ (Darshan) ಜೊತೆ ರಚನಾ ರೈ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್ ಮುಂತಾದವರು ಅಭಿನಯಿಸಿದ್ದಾರೆ. ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿರುವುದಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ತುಂಬಾ ಖುಷಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.